ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6 ರ ಮಾರ್ಚ್ 9 ರ ದಿನಭವಿಷ್ಯ

ಈ ದಿನ ಬಿಳಿ ಬಟ್ಟೆ ಧರಿಸುವುದರಿಂದ ಚಂದ್ರ ಬಲ ವೃದ್ಧಿ. ಕೆಲಸ-ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಉತ್ಸಾಹ ಬರುವುದಕ್ಕೆ, ಶೀಘ್ರ ನಿರ್ಧಾರ ಮಾಡುವುದಕ್ಕೆ, ಕ್ರಿಯೇಟಿವ್ ಆಲೋಚನೆಗಳು ಬರುವುದಕ್ಕೆ ಸಹಕಾರಿಯಾಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಸಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆಯಾಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವುದು ಇದೆ, ಆದ್ದರಿಂದ ನೀವು ಅಂತಹ ಪರಿಸರದಲ್ಲಿ ಯೋಗ ಮಾಡುವಾಗ ಅಥವಾ ಕಾರ್ಯ ನಿರ್ವಹಣೆ ಮಾಡುವಾಗ ಸಾಮಾನ್ಯ ದಿನದಿಂದ ಎಚ್ಚರಿಕೆ ವಹಿಸಿ. ಇಲಿಕಲ್ ಸಾಧನಗಳ ಮಾರಾಟ ಮಳಿಗೆ ಇಟ್ಟಿರುವವರಿಗೆ ಆದಾಯ ಮೂಲ ಹೆಚ್ಚಾಗುವುದಕ್ಕೆ ಮಾರ್ಗೋಪಾಯ ಗೋಚರವಾಗುತ್ತದೆ. ಆದರೆ ಇದರ ಬಗ್ಗೆ ನಿಮ್ಮ ಆಸಕ್ತಿ ಕುದುರುವುದಿಲ್ಲ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಬೇಕು. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *