
ನೀವು ಬಳಸದೆ ಹಾಗೆಯೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತ ಕೋಪ ಹಾಗೂ ಹೆದರಿಕೆ ಕಾಡುತ್ತಾ ಇದ್ದಲ್ಲಿ ದೂರದ ಆಸೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):
ಕೋರ್ಟ್-ಕಚೇರಿ ಅಲೆದಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಗೆ ಬರುವ ಸಾಧ್ಯತೆ ಇದೆ. ಮನಸ್ಸಿನಿಂದ ಆಲೋಚನೆ ಮಾಡುವುದು ಒಳ್ಳೆಯದು. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನಿರೀಕ್ಷಿತವಾಗಿ ಆತಂಕ ಎದುರಾಗಲಿದೆ. ಯಾವುದೋ ಮುಖ್ಯವಾದ ಸಂಗತಿಯನ್ನು ಮರೆತಿದೆ ಎಂಬುದು ಈ ಆತಂಕದ ಮೂಲ ಆಗಲಿದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):
ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರುತ್ತದೆ. ಅದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಸಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು.
ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):
ಆಸಕ್ತಿಯಿಂದ ಕೋರ್ಸ್ ನಡೆಯುತ್ತಿರುವುದು ಖಚಿತವಾಗಿ, ಬೇಸರ ಮಾಡಿಕೊಳ್ಳುವಂತೆ ಆಗಲಿದೆ. ಯೂಟ್ಯೂಬರ್ಗೆ ಖರ್ಚಿನ ಪ್ರಮಾಣ ಹೆಚ್ಚಾಗುತ್ತದೆ, ಅದನ್ನು ಹೇಗೆ ಹೊಂದಿಸುವುದು ಎಂದು ತಿಳಿಯದೆ ಕಂಗಾಲಾಗುತ್ತೀರಿ. ಹಿರಿಯ ಮನೆಯಲ್ಲಿ ಹೇಳುವಂಥ ಸಲಹೆ- ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ. ಎಲ್ಲ ವಿಚಾರಕ್ಕೂ ಪ್ಲಾನ್ ಬಿ ಮಾಡಿಕೊಳ್ಳುವ ನಿಮ್ಮ ವಿಧಾನದಿಂದ ದೊಡ್ಡ ಅನುಕೂಲ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.