Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9 ರ ಮಾರ್ಚ್ 19 ರ ದಿನಭವಿಷ್ಯ

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯ ಮನಸ್ಸಿನಲ್ಲಿ ಸ್ಮರಣೆ ಮಾಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗಲಿದೆ. ಯಾವ ಕೆಲಸವನ್ನು ಮಾಡಬಾರದು, ಯಾವ ವ್ಯಕ್ತಿಯ ಜೊತೆಗೆ ಮಾತನಾಡಬಾರದು ಎಂದುಕೊಂಡಿರುತ್ತೀರೋ ಅದೇ ಕೆಲಸವನ್ನು ಮಾಡುತ್ತೀರಿ ಹಾಗೂ ನೀವಾಗಿಯೇ ಆ ವ್ಯಕ್ತಿಯೊಂದಿಗೆ ಮಾತನಾಡುತ್ತೀರಿ. ಹಾಗಂತ ನೀವು ಮಾನಸಿಕವಾಗಿ ದುರ್ಬಲರಾದಿರಿ ಅಂತಲ್ಲ. ಯಾವುದೇ ಮನಸ್ಸಿನ ಕಹಿಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನಿಮಗೆ ಇಷ್ಟ ಇರುವುದಿಲ್ಲ ಎಂದರ್ಥ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಮನಸ್ತಾಪಗಳು- ಅಭಿಪ್ರಾಯ ಭೇದಗಳು ನಿವಾರಣೆ ಆಗಲಿವೆ. ತಂದೆ- ತಾಯಿಯ ಆರೋಗ್ಯ ವಿಚಾರ ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಆದರೆ ಅದಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಪಡೆಯಲು ಸಾಧ್ಯ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಈ ದಿನ ಮಿಶ್ರ ಫಲಿತಾಂಶ ದೊರೆಯಲಿದೆ. ಕೆಲವು ಬೆಳವಣಿಗೆಗಳು ನಿಮಗೆ ಪೂರಕವಾಗಿಯೂ ಮತ್ತೆ ಕೆಲವು ಬಾಧಕವಾಗಿಯೂ ಆಗಬಹುದು.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *