Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 24ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 24ರ ದಿನಭವಿಷ್ಯ


ಸಂಖ್ಯಾಶಾಸ್ತ್ರದ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9 ರ ಮಾರ್ಚ್ 24 ರ ದಿನಭವಿಷ್ಯ

ಜನ್ಮಸಂಖ್ಯೆ ೭, ೮, ೯ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ ಎದುರಾಗಲಿದೆ. ಎಂಥ ಅನಿವಾರ್ಯ ಸ್ಥಿತಿಯೇ ಇದ್ದರೂ ಇತರರ ವಾಹನಗಳು ಅಥವಾ ವಸ್ರುಗಳನ್ನು ಬಳಸುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಯಾರ ರಾಜಕೀಯ ಕ್ಷೇತ್ರದಲ್ಲಿ ಇದ್ದಾರೋ ಅಂಥವರಿಗೆ ನಿರೀಕ್ಷೆ ಕೂಡ ಮಾಡದಂಥ ಅವಕಾಶವೊಂದು ದೊರೆಯುವ ಸಾಧ್ಯತೆಗಳಿವೆ. ಇದನ್ನು ನೀವು ನಂಬುವುದಕ್ಕೆ ಸಹ ಸಾಧ್ಯವಾಗಲಿಲ್ಲ. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಚಿಸಿದರೆ ಒಳ್ಳೆಯದು. ಕೋರ್ಟ್-ಕಚೇರಿ ವ್ಯಾಜ್ಯಗಳಲ್ಲಿ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದಾಗಿ ಹೇಳುತ್ತಿದ್ದಾರೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮಾನಸಿಕವಾಗಿ ಸ್ವಲ್ಪ ಗೊಂದಲವಿದೆ. ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯುವುದು ಉತ್ತಮ. ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ, ಯಾರಿಗೂ ಸಾಲ ನೀಡಬೇಡಿ. ಮತ್ತು ಕೆಲಸದಲ್ಲಿರುವವರಿಗೆ ಇಂದು ಅತ್ಯುತ್ತಮ ದಿನ. ನಿಮ್ಮ ಜ್ಞಾನಕ್ಕೆ ಮನ್ನಣೆ ಸಿಗಲಿದೆ. ದೂರದ ಪ್ರಯಾಣದ ಯೋಗವಿದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *