ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠಚಿತ್ರದ ಕ್ರೆಡಿಟ್ ಮೂಲ: TV9 ನೆಟ್ವರ್ಕ್ ಮತ್ತು IANS
ಬೆಂಗಳೂರು, ಫೆಬ್ರವರಿ 23: ‘ಇಂಡಿಯಾ ಎಐ ಸಮ್ಮಿಟ್ (ಭಾರತ AI ಶೃಂಗಸಭೆ)’ ಸಂದರ್ಭ ಯುವ ಕಾಂಗ್ರೆಸ್ (ಯುವ ಕಾಂಗ್ರೆಸ್) ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ (ಮಾರ್ಗರೇಟ್ ಆಳ್ವಾ) ಅವರೇ ಯುವ ಕಾಂಗ್ರೆಸ್ ನಾಯಕರ ನಡೆಯನ್ನು ಖಂಡಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ ಎಂದು ಅವರು ಒತ್ತಿ ಹೇಳಿದರು. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಾಗ್ನ ಪ್ರತಿಭಟನೆ ಕುರಿತು ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಘನತೆ, ಶಿಸ್ತು ಮತ್ತು ಜವಾಬ್ದಾರಿ ಇರಬೇಕು ಎಂದು ಭಾವಿಸುತ್ತೇನೆ.
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐ ಶೃಂಗಸಭೆ ಸಂದರ್ಭ ಭಾರತ ಯುವ ಕಾಂಗ್ರೆಸ್ ಸದಸ್ಯರು ಬಿಚ್ಚಿಟ್ಟ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ಘಟನೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಾರ್ಗರೇಟ್ ಆಳ್ವಾ ಮಾತಿನ ವಿಡಿಯೋ
ಬೆಂಗಳೂರು, ಕರ್ನಾಟಕ: ಭಾರತ ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆಯ ಕುರಿತು, ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವ ಮಾರ್ಗರೆಟ್ ಆಳ್ವ ಅವರು, “ಅಂತರರಾಷ್ಟ್ರೀಯ ಸಮಾರಂಭಗಳಲ್ಲಿ ಘನತೆ ಇರಬೇಕು, ಶಿಸ್ತು ಇರಬೇಕು ಮತ್ತು ಜವಾಬ್ದಾರಿಯ ಪ್ರಜ್ಞೆ ಇರಬೇಕು” ಎಂದು ಹೇಳಿದರು. pic.twitter.com/9et4obYslZ
— IANS (@ians_india) ಫೆಬ್ರವರಿ 22, 2026
ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಬಂಡವಾಳಗಾರರ ಗಮನಸೆಳೆದ ಕಾರ್ಯಕ್ರಮ. ಆ ಸಂದರ್ಭದಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆ ವೇಳೆ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ನರಸಿಂಹ ಅವರನ್ನು ಬಂಧಿಸಿದ್ದರು.
ಇನ್ನೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಯುವ ಕಾಂಗ್ರೆಸ್ ನಾಯಕರ ಅರೆನಗ್ನ ಪ್ರತಿಭಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ಎಐ ಶೃಂಗಸಭೆ ವೇಳೆ ನಡೆದಿದ್ದೇನು?
ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಇದನ್ನೂ ಓದಿ: ‘ನೀವೀಗಾಗಲೇ ಬೆತ್ತಲಾಗಿದ್ದಿರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್ ಗೆ ಪ್ರಧಾನಿ ಮೋದಿ ತರಾಟೆಗೆ
ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದರು. ಕಾಂಗ್ರೆಸ್ ಪಕ್ಷದ ಕೊಳಕು ಮತ್ತು ಬೆತ್ತಲೆ ರಾಜಕಾರಣ ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂದು ಈ ಪ್ರತಿಭಟನೆ ತೋರಿಸಿಕೊಟ್ಟಿದೆ ಎಂದು ಮೋದಿ ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 12:04 pm, ಸೋಮ, 23 ಫೆಬ್ರವರಿ 26