
ಗದಗ, ಏಪ್ರಿಲ್ 3: ಜಿಲ್ಲೆಯಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಕಳ್ಳತನದ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶದಲ್ಲಿ ಸಂಚರಿಸುತ್ತಿರುವ ರಾತ್ರಿ ಮಾರಕಾಸ್ತ್ರ ಹಿಡಿದು ಐವರು ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಎಂಬುವವರು ಜನ್ಮದಿನದ ಕಾರ್ಯಕ್ರಮಕ್ಕೆ ತಂದೆಯ ಮನೆಗೆ ಹೋದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ರಾತ್ರಿ 8 ಗಂಟೆಯಾಗುತ್ತಿದ್ದಂತೆ ಜನ ಹೊರಬರಲು ಹೆದರುತ್ತಿದ್ದರು, ಕೂಡಲೇ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಕಾಣುತ್ತಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ