
ಮುಂಬೈ, ಏಪ್ರಿಲ್ 9: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಮುಂಬೈ ವಿಮಾನ ನಿಲ್ದಾಣ) ಟರ್ಮಿನಲ್ 1 ಬಿ ಒಳಗೆ ಇಂದು ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಟರ್ಮಿನಲ್ ಒಳಗಿನ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಹೇಳಿದ್ದಾರೆ. ಬೆಂಕಿ ಟರ್ಮಿನಲ್‌ನ ನೆಲ ಮಹಡಿಯಲ್ಲಿ ಮಾತ್ರ ಸಿಕ್ಕಿದ್ದು ಮಾಹಿತಿ ಪಡೆದ ಕೂಡಲೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ಸಿಬ್ಬಂದಿ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ