ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕಿಸ್ತಾನದ (ಪಾಕಿಸ್ತಾನ) ವಿದೇಶಾಂಗ ಸಚಿವಾಲಯದ ವಕ್ತಾರರ ಹೇಳಿಕೆಗಳನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕೃತ್ಯಗಳೇ ಎಲ್ಲ ಹೇಳುತ್ತವೆ. ನಮ್ಮ ದೇಶದಲ್ಲಿ ಆ ರೀತಿಯ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರ ಹೇಳಿಕೆ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತ ಹೇಳಿಕೆಗಳನ್ನು ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡುತ್ತಲೇ ಬಂದಿರುವ ದೇಶದಿಂದ ಈ ಹೇಳಿಕೆ ಬಂದಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಬಾಂಗ್ಲಾದೇಶ ಮಾರ್ಗದ ಮೂಲಕ ಭಾರತಕ್ಕೆ ಉಗ್ರರನ್ನು ನುಸುಳಲು ಪಾಕಿಸ್ತಾನ ಯೋಜನೆ
“ಈ ವಿಷಯದಲ್ಲಿ ಕಳಪೆ ದಾಖಲೆಯನ್ನು ಹೊಂದಿರುವ ದೇಶದ ಹೇಳಿಕೆಗಳನ್ನು ನಾವು ತಿರಸ್ಕರಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪಾಕಿಸ್ತಾನದ ಆಂತರಿಕ ಸಮಸ್ಯೆಗಳ ನಡುವೆ ನಮ್ಮ ದೇಶದ ಕಡೆ ಬೆರಳು ತೋರಿಸುವ ಪ್ರಯತ್ನಗಳ ಕಡೆಗೆ ನಾವು ಗಮನವನ್ನು ನೀಡುವುದಿಲ್ಲ. ತಮ್ಮ ದೇಶದ ಮೇಲಿನ ಆರೋಪವನ್ನು ನಮ್ಮೆಡೆಗೆ ತಿರುಗಿಸುವ ಉಪಾಯವಿದು” ಎಂದು ಜೈಸ್ವಾಲ್ ಟೀಕಿಸಿದ್ದಾರೆ.
ಭಾರತದಲ್ಲಿನ ಘಟನೆಗಳ ಕುರಿತು ಪಾಕಿಸ್ತಾನಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟೀಕೆಗಳಿಗೆ ಸಂಬಂಧಿಸಿದಂತೆ ಮಾಧ್ಯಮದ ಪ್ರಶ್ನೆಗಳಿಗೆ ನಮ್ಮ ಪ್ರತಿಕ್ರಿಯೆ ⬇️
🔗 https://t.co/xMhlbQZYqc pic.twitter.com/WU09obKsbj
– ರಣಧೀರ್ ಜೈಸ್ವಾಲ್ (@MEAIndia) ಡಿಸೆಂಬರ್ 29, 2025
ಕ್ರಿಸ್‌ಮಸ್ ಆಚರಣೆಯ ಸಮಯದಲ್ಲಿ ನಡೆದ ದಾಳಿಗಳು ಮತ್ತು ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರವನ್ನು ಗಮನಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನದ ಈ ಸಮುದಾಯವನ್ನು ಒತ್ತಾಯಿಸಿದ ನಂತರ ಭಾರತ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡಿದೆ. ಇತ್ತೀಚಿನ ಘಟನೆಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಹಿರ್ ಅಂದ್ರಾಬಿ ಈ ಹೇಳಿಕೆ ನೀಡಿದ್ದರು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ತೀವ್ರ ಕಳವಳಕಾರಿ ಎಂದು ಆಂಧ್ರಬಿ ಬಣ್ಣಿಸಿದ್ದರು.
ಇದನ್ನೂ ಓದಿ: ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ
ಪಾಕಿಸ್ತಾನವು ಇತರ ದೇಶಗಳ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುವ ಬದಲಿಗೆ ಅಲ್ಪಸಂಖ್ಯಾತರ ತನ್ನದೇ ಆದ ಮಾನವ ಹಕ್ಕುಗಳ ದಾಖಲೆಯನ್ನು ಸರಿಪಡಿಸುವ ಗಮನಹರಿಸಬೇಕು ಎಂದು ಭಾರತ ಪದೇ ಪದೇ ಒತ್ತಿಹೇಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ