ಬಳ್ಳಾರಿ, ಫೆ.6: ನಗರದ ನಾಗಲಕೇರಿಯಲ್ಲಿರುವ ಐತಿಹಾಸಿಕ ವೀರ ಬಾಲಾಂಜನೇಯ ಆಂಜನೇಯ ಸ್ವಾಮಿ ದೇವಸ್ಥಾನದ ಮಾಂಸದ ತುಂಡುಗಳನ್ನು ಸಿದ್ಧಪಡಿಸಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ 5:30 ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು , ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸದ ತುಂಡುಗಳನ್ನು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ದೇವಸ್ಥಾನದ ಜಮಾಯಿಸಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬಿಜೆಪಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಪ್ರಾಂಗಣದಲ್ಲಿ ಮಾಂಸ ಪತ್ತೆಯಾದ ಘಟನೆಯು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರ ಪ್ರಕಾರ, ಇದು ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ನಡೆಸುತ್ತಿರುವ ಕೃತ್ಯವಾಗಿದೆ. ಪತ್ತೆಯಾದ ಮಾಂಸವು ಗೋಮಾಂಸದ ತುಂಡುಗಳೆಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆ ನಡೆದಿರುವ ಕುರಿತು ತನಿಖೆ ಕೈಗೊಳ್ಳಲಾಗಿದೆ. ಹಿಂದೂಪರ ಸಂಘಟನೆಗಳು ನೀಡಿರುವ ಹೇಳಿಕೆ ಪ್ರಕಾರ, “ಇದು ಬೀದಿ ನಾಯಿಗಳು ಹಾಕಿದ, ಮಾಂಸದ ಕವರ್ ಇಷ್ಟು ನೀಟ ತಂದು ಇಡಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಹಬ್ಬ ಆಚರಣೆ ಮಾಡ್ತೇವೆ ಈ ಮಾಂಸವನ್ನು ನಾಯಿ ಅಥವಾ ಬೆಕ್ಕು ತಂದು ಹಾಕಬಹುದು ಈ ಬಗ್ಗೆ ಸೂಕ್ತ ತನಿಖೆ ಆಗಲಿ ಎಂದು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ