ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನ ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಶಿದ್ಧವಾಗಿದೆ. ನಾಗರಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ