ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ


ರೋಗಿಗಳ ಮೇಲೂ ಎಫೆಕ್ಟ್: ಔಷಧಗಳ ದರ ಶೇ 15ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಉತ್ಪನ್ನಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಕಳವಳ ವ್ಯಕ್ತಪಡಿಸಿದ್ದು, ತುರ್ತು ಈ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸದ್ಯಕ್ಕೆ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲವಾದರೂ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಸಮಸ್ಯೆ ಸೃಷ್ಟಿಸಲಿದೆ ಎಂದು ಅವರು ಪ್ರಕಟಿಸಿದ್ದಾರೆ. ಪೆಟ್ರೋಕೆಮಿಕಲ್ಸ್ ಮತ್ತು ಎಕ್ಸಿಪಿಯೆಂಟ್ಸ್ (ಬೈಂಡಿಂಗ್ ಏಜೆಂಟ್, ಸ್ಟಾರ್ಚ್ ಪೌಡರ್) ಬೆಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಎರಡು-ಮೂರು ತಿಂಗಳ ನಂತರ ಮಾರುಕಟ್ಟೆಗೆ ಬರುವ ಹೊಸ ಔಷಧಗಳ ಬೆಲೆ ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *