ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ


ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ಮಂಡ್ಯ, ಮಾರ್ಚ್ 29: ಜಿಲ್ಲೆಯ ಪಾಂಡವಪುರದಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ನಡೆಯಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆ ಎಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ನಡೆಯುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ದೇವಾಲಯದ ಆವರಣವು ಭಕ್ತಿ-ಭಾವಗಳಿಂದ ತುಂಬಿ ತುಳುಕುತ್ತಿತ್ತು. ಭಕ್ತರು ಜೈ ಚಲುವನಾರಾಯಣಸ್ವಾಮಿ ಎಂದು ಜಯಘೋಷಗಳನ್ನು ಕೂಗುತ್ತಾ, ತಮ್ಮ ಇಷ್ಟದ ದೇವರ ದರ್ಶನ ಪಡೆದು ಪುನೀತರಾದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *