ಬೆಂಗಳೂರು, (ನವೆಂಬರ್ 19): ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದಾರೆ. ಬಾಕಿ ಉಳಿದುಕೊಂಡಿರುವ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆ ಹಣವನ್ನು ಒಂದೇ ಸಲಕ್ಕೆ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ.