ದಾವಣಗೆರೆ, ಜನವರಿ 31: ಜಿಲ್ಲಾ ಆಸ್ಪತ್ರೆಯ ಯುವಕರ ಮೇಲೆ ದಾಳಿ ಪ್ರಕರಣ ಸಂಬಂಧ ಬಂದ ಪೊಲೀಸರ ಮೇಲೆಯೇ ಕಾಂಗ್ರೆಸ್ಮುಖಂಡ, ಸಚಿವರ ಆಪ್ತನ ಮಗ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಪುತ್ರ ಹಸನ್ ಆರೋಪಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆ ಮುಂದೆ ಭಾರಿ ಹೈಡ್ರಾಮ ನಡೆದಿದೆ. ಅಂತಿಮವಾಗಿ ಹಸನ್ ಅವರನ್ನು ಬಂಧಿಸಲಾಗಿದೆ.
ಅಷ್ಟಕ್ಕೂ ಆಗಿದ್ದೇನು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಎದುರು ಕ್ಷುಲ್ಲಕ ಕಾರಣಕ್ಕೆ ಕೋಮಿನ ಎರಡು ಗುಂಪು ಬಡಿದಾಡಿಕೊಂಡಿತ್ತು.ಗಲಾಟೆಯಲ್ಲಿ 6 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳಕ್ಕೆ ಆಗಮಿಸಿದ ಒಂದೇ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲಾಗಿದೆ. ಯುವಕರ ಮೇಲೆ ದಾಳಿ ಮಾಡಿರೋದು ಅಯೂಬ್ ಪೈಲ್ವಾನ್ ಪುತ್ರರು ಎಂಬ ಕಾರಣಕ್ಕೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಬಡಾವಣೆ ಕೆಪೆಕ್ಟರ್ ಇನ್ಸ್ ಪೆಕ್ಟರ್ ಗಾಯತ್ರಿ, ಕಾನ್ ಟೇಬಲ್ ಗಳಾದ ಚಪ್ಪ ಮತ್ತು ಹರೀಶ್ ಸೇರಿ ತಂಡ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಆರೋಪಿ ಹಸನ್, ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ರೋಗಿರೋ ಪೊಲೀಸ್ ಸಿಬ್ಬಂದಿಗಳಾದ ಕೆಂಚಪ್ಪ ಮತ್ತು ಹರೀಶ್ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ
ಜಿಲ್ಲಾ ಆಸ್ಪತ್ರೆಯ ಗಲಾಟೆ ವಿಚಾರವಾಗಿ ದಾವಣಗೆರೆಯಲ್ಲಿ ಬಿಗು ವಾತಾರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನು ಮುಂದೆ ನಡೆಯುತ್ತಿರುವ ಅಪರಾಧ ಕೃತ್ಯಗಳಲ್ಲಿ ಮೇಲಿಂದ ಮೇಲೆ ಸಚಿವರ ಆಪ್ತರ ಹೆಸರು ಕೇಳಿಬರುತ್ತಿದೆ. ಇತ್ತೀಚಿಗೆ ಡ್ರಗ್ಸ್ ಕೇಸ್ ನಲ್ಲಿ ಶಾಮನೂರು ವೇದಮೂರ್ತಿ, ಅನ್ವರ್ ಪಾಷಾ ಜೈಲು ಸೇರಿದ್ದಾರೆ. ಸಾಗಾಣಿಕೆಯಲ್ಲಿ ಜಮೀರ್ ಅಕ್ಕಿ ಎಂಬಾತ ಸಿಕ್ಕಿ ಬಿದ್ದಿದ್ದ. ಈ ನಡುವೆ ಅಯೂಬ್ ಪೈಲ್ವಾನ್ ಪುತ್ರ ಹಾಡುಗಳು ಆಸ್ಪತ್ರೆಯಿಂದ ಹೊಡೆದಾಟ ನಡೆಸಿದ್ದಾನೆ. ಜೊತೆಗೆ ಪೊಲೀಸರ ಮೇಲೆ ಹಲ್ಲೆಯ ಆರೋಪವೂ ಕೇಳಿಬಂದಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 10:23 pm, ಶನಿ, 31 ಜನವರಿ 26