ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್​​ಕೇರ್​: ಬಜೆಟ್​​ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್​​ಕೇರ್​: ಬಜೆಟ್​​ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್


ಸ್ವಪಕ್ಷೀಯರ ವಿರೋಧಕ್ಕೂ ಡಾಂಟ್ ಕೇರ್: ಬಜೆಟ್ ಕುರಿತ ಹೇಳಿಕೆಯನ್ನು ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್

ಬೆಂಗಳೂರು, ಮಾರ್ಚ್ 13: ಕರ್ನಾಟಕ ಬಜೆಟ್ ಕುರಿತು ತಮ್ಮ ಹೇಳಿಕೆಗೆ ಸ್ವಪಕ್ಷ ನಾಯಕರ ಆಕ್ರೋಶದ ನಡುವೆಯೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಾವು ಆಡಿದ್ದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ ಮತ್ತು ತಮ್ಮ ನಂಬಿಕೆ ಹುಸಿಯಾಗಿದೆ ಎಂದು ಹೇಳಿದ್ದರಲ್ಲಿ ತಪ್ಪಿಲ್ಲ. ನಾನು ಐಎಎಸ್ ಅಥವಾ ಕೆಇಎಸ್ ಅಧಿಕಾರಿ ಅಲ್ಲ. ಬದಲಿಗೆ ಜನರ ಮತದಿಂದ ಆಯ್ಕೆಯಾದ ಜನಪ್ರತಿನಿಧಿ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ. ನನ್ನ ಕ್ಷೇತ್ರವಾದ ರಾಮನಗರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹೀಗಿರುವಾಗ ತಮ್ಮ ಕ್ಷೇತ್ರದ ಜನರ ಪರವಾಗಿ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *