
ಮೇಜರ್ ಲೀಗ್ ಕ್ರಿಕೆಟ್ 2025 ರ 17 ನೇ ಪಂದ್ಯದಲ್ಲಿ, ಶಾರುಖ್ ಖಾನ್ ಓಡೆತನದ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡ ವೆಸ್ಟ್ ಇಂಡೀಸ್ ಆಲ್ರೌಂಡರ್ ಜೇಸನ್ ಹೋಲ್ಡರ್ ಮಾಡಿದ ತಪ್ಪಿನಿಂದಾಗಿ ಟೂರ್ನಿಯಲ್ಲಿ ಐದನೇ ಸೋಲನ್ನು ಎದುರಿಸಬೇಕಾಯಿತು. ವಾಸ್ತವವಾಗಿ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಗೆಲ್ಲಲು ಒಂದು ಎಸೆತದಲ್ಲಿ ಒಂದು ರನ್ ಅಗತ್ಯವಿತ್ತು. ಈ ವೇಳೆ ಸ್ಟ್ರೈಕ್ನಲ್ಲಿದ್ದ ಗ್ಲೆನ್ ಫಿಲಿಪ್ಸ್ ಗಾಳಿಯಲ್ಲಿ ಶಾಟ್ ಹೊಡೆದರು. ಅದನ್ನು ಕ್ಯಾಚ್ ತೆಗೆದುಕೊಳ್ಳುವಲ್ಲಿ ಜೇಸನ್ ಹೋಲ್ಡರ್ ಮೊದಲ ಯತ್ನದಲ್ಲಿ ವಿಫಲರಾದರು. ಆ ನಂತರ ಹೋಲ್ಡರ್ಗೆ ಮತ್ತೆ ಚೆಂಡನ್ನು ಹಿಡಿಯುವ ಅವಕಾಶ ಸಿಕ್ಕಿತ್ತು. ಆದರೆ ಎರಡನೇ ಯತ್ನದಲ್ಲೂ ಹೋಲ್ಡರ್ ಕ್ಯಾಚ್ ಅನ್ನು ಪೂರ್ಣಗೊಳಿಸಲಿಲ್ಲ. ಹೀಗಾಗಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡ 5 ವಿಕೆಟ್ಗಳಿಂದ ಹೀನಾಯ ಸೋಲನ್ನು ಎದುರಿಸಬೇಕಾಯಿತು.