ಶಿರಾಡಿ ಘಾಟ್​​​ನಲ್ಲಿ ರೈಲು-ರೋಡ್ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ

ಶಿರಾಡಿ ಘಾಟ್​​​ನಲ್ಲಿ ರೈಲು-ರೋಡ್ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ


ಮಂಗಳೂರು, ನವೆಂಬರ್ 7: ಮಂಗಳೂರು- ಬೆಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ (ಶಿರಾಡಿ ಘಾಟ್) ಸುರಂಗ ಮಾರ್ಗ ಸೇರಿದಂತೆ ರೈಲು ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿಯಾಗಿ ಸಮೀಕ್ಷೆ ನಡೆಸಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ.

ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆ ಸಮಿತಿ ರಚನೆ ಕೋರಿ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಸಮಿತಿ ರಚಿಸುವುದಾಗಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಯೋಜನೆಡಿ ಶಿರಾಡಿ ಘಾಟ್‌ನಲ್ಲಿ ರಸ್ತೆ ಹಾಗೂ ಮತ್ತೊಂದು ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನೆಯ ವರದಿಯನ್ನು ಸಿದ್ಧಪಡಿಸಲು ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ಸಮಿತಿ ರಚಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸಚಿವಾಲಯಕ್ಕೆ ಮನವಿ ಮಾಡಿದರು. ಅವರ ಮನವಿಗೆ ಪ್ರತಿಕ್ರಿಯಿಸಿದ ಕೇಂದ್ರ ಕೇಂದ್ರ ಸಚಿವಾಲಯವು ಜಂಟಿ ಕಾರ್ಯಕಾರಿ ಸಮಿತಿ ರಚನೆ ಮಾಡಿದೆ.

ಈ ಸಮಿತಿಯು ಶಿರಾಡಿ ಘಾಟ್ ಪ್ರದೇಶದ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಅವರು ಬ್ರಿಜೇಶ್ ಚೌಟ ಅವರಿಗೆ ಬರೆದಿರುವ ಪತ್ರದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಇದೇ ನ.28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಶೇಷತೆ ಏನು ಗೊತ್ತಾ?

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಬ್ರಿಜ ಚೌಟ, ಇದು ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಬಗೆಗಿನ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟ್ ಪ್ರದೇಶದ ಪರಿಸರ ಸೂಕ್ಷ್ಮತೆ ಮತ್ತು ಭೌಗೋಳಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು ಈ ಭಾಗದ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ಧಿ ಕಾಮಗಾರಿಗೆ ರೈಲ್ವೇ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜಂಟಿ ಸಮೀಕ್ಷೆ ಮತ್ತು ಡಿಪಿಆರ್ ಮೇಲ್ವೀಚಾರಣೆಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ತಕ್ಷಣ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *