IPL 2026: ಇಂಡಿಯನ್ ಪ್ರೀಮಿಯರ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದೆ, ಈ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡವು ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿ ಕಾಣಿಸುತ್ತದೆ ಮೊಹಮ್ಮದ್ ಶಮಿ.
ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದ ಕೂಡ ಈ ಬಾರಿಯ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕಪಟ್ಟಿ ಟಾಪ್-4 ನಲ್ಲಿ ಕಾಣಿಸಿಕೊಂಡಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.




