ಮಂಗಳೂರು, ಅಕ್ಟೋಬರ್ 28: ಮೊಂಟಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವದಿಂದ ಬಿಟ್ಟು ಮಳೆಯಾಗುತ್ತಿದೆ, ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದೆ. ಮಂಗಳೂರು ತಣ್ಣೀರುಬಾವಿ ಸಮುದ್ರ ತೀರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗವೂ ಹೆಚ್ಚಾಗುತ್ತದೆ. ಈ ಮೀನುಗಾರಿಕೆ ಇಲಾಖೆಯು ಮೀನುಗಾರರಿಗೆ ಆಳಸಮುದ್ರ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಕಳೆದ ಮೂರು ದಿನಗಳ ಹಿಂದೆಯೇ ಸೂಚನೆ ನೀಡಲಾಗಿತ್ತು, ತೆರಳಿದ್ದ ಮೀನುಗಾರರು ವಾಪಸ್ ಬರುವಂತೆ ಸೂಚಿಸಲಾಗಿದೆ. ಸುಮಾರು ದೋಣಿಗಳು ಬಂದರಿನಲ್ಲಿ ಲಂಗರು ಹಾಕಿವೆ. ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ, ನಾಡದೋಣಿ ಮೀನುಗಾರಿಕೆಗೂ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅವಘಡ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ