
ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (ಮಹಿಳೆ) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (ಬಾಗಲಕೋಟೆ) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎಂಬ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿಕೊಂಡು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರೂಪಾ 2018ರಲ್ಲಿ ಹನಮಂತ ಬಾದಾಮಿ ಎಂಬಾತನೊಂದಿಗೆ ಮದುವೆ ಮಾಡಿಕೊಂಡಿದ್ದು, ದಂಪತಿಗೆ ಮೂರು ಮಕ್ಕಳು ಸಹ ಇದ್ದವು. ಆದರೆ, ಅತ್ತೆ ರೇಣವ್ವ ಕಿರುಕುಳ ಹೆಚ್ಚಾಗಿತ್ತು. ಇದರಿಂದ ಬೇಸತ್ತು ರೂಪಾ ಮೊದಲು ತನ್ನ ಮೂವರು ಮಕ್ಕಳಿಗೆ ಹಗ್ಗದಿಂದ ಮನೆಯ ಜಂತಿಗೆ ನೇಣು ಹಾಕಿ ಕೊಂದಳು. ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಬದುಕುಳಿದಿದ್ದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಇದನ್ನೂ ಓದಿ: ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ
ಇನ್ನು ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಹಾಗೂ ಬಾಗಲಕೋಟೆ ಎಸ್ ಪಿ ಸಿದ್ದಾರ್ಥ ಗೋಯೆಲ್ ಭೇಟಿ ಪರಿಶೀಲನೆ. ಕೌಟುಂಬಿಕ ಕಲಹಕ್ಕೆ ರೂಪಾಳ ದುಡುಕಿನ ನಿರ್ಧಾರಕ್ಕೆ ಅನಾಯಾಸವಾಗಿ ಮೂವರು ಮಕ್ಕಳ ಜೀವ ಹೋಗಿದ್ದು ದುರಂತವೇ ಸರಿ.