Headlines

ರೈತರ ಕಷ್ಟ ಗೊತ್ತೇನ್ರೀ? ಎಸಿ ರೂಮಲ್ಲಿ ಕುಳಿತುಕೊಂಡು ರೈತರ ಕಷ್ಟ ಕೇಳೋ ರಾಜಕಾರಣಿಗಳಿಗೆ ವಿದ್ಯಾರ್ಥಿನಿ ಖಡಕ್ ಪ್ರಶ್ನೆ

ರೈತರ ಕಷ್ಟ ಗೊತ್ತೇನ್ರೀ? ಎಸಿ ರೂಮಲ್ಲಿ ಕುಳಿತುಕೊಂಡು ರೈತರ ಕಷ್ಟ ಕೇಳೋ ರಾಜಕಾರಣಿಗಳಿಗೆ ವಿದ್ಯಾರ್ಥಿನಿ ಖಡಕ್ ಪ್ರಶ್ನೆ


ಬಾಗಲಕೋಟೆ, ನವೆಂಬರ್ 13: ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ಸೂಚಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ​​ಪ್ರತಿಭಟನೆಗೆ ಶಿರೋಳದ ರಮೇಶ್ ಗಡದನ್ನವರ ಹೈಸ್ಕೂಲ್ ವಿದ್ಯಾರ್ಥಿಗಳ ಬೆಂಬಲ ಸೂಚಿಸಿದ್ದಾರೆ. ಇದೇ ವೇಳೆ, ವಿದ್ಯಾರ್ಥಿನಿಯೊಬ್ಬರು ಆಕ್ರೋಶದಿಂದ ಮಾತನಾಡಿರುವುದು ಗಮನ ಸೆಳೆದಿದೆ. ರೈತರು ಹಗಲಿರುಳು ದುಡಿದು ಬೆಳೆ ಬೆಳೆದರೂ ಕಾರ್ಖಾನೆ ಮತ್ತು ಸರ್ಕಾರ ಅವರ ಪರಿಶ್ರಮಕ್ಕೆ ಬೆಲೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿಗಳ ಬೆಲೆಯನ್ನು ಕೇಳುತ್ತಿದ್ದಾರೆ, ಇದು ಅವರ ಹಕ್ಕು ಎಂದು ಪ್ರತಿಪಾದಿಸಿದ್ದಾರೆ. ರೈತರು ಸಾಲ ಮಾಡಿ ಕಬ್ಬು ಬೆಳೆಯುತ್ತಾರೆ, ಆದರೆ ಕೊನೆಗೆ ಅವರ ಕೈಗೆ ಏನೂ ಉಳಿಯುವುದಿಲ್ಲ. ಒಂದು ಕೆಜಿ ಸಕ್ಕರೆಗೆ 42 ರೂಪಾಯಿ ಸಿಗುವಾಗ, ಒಂದು ಟನ್ ಕಬ್ಬಿಗೆ 3,500 ರೂಪಾಯಿ ನೀಡುವುದು ನ್ಯಾಯಯುತವಾಗಿದೆ. ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ವಿದ್ಯಾರ್ಥಿನಿ ಸೂಚನೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *