ಬಾಗಲಕೋಟೆ, ನವೆಂಬರ್ 09: ರಾಜ್ಯದಲ್ಲಿ ಕಬ್ಬಿನ ದರ ನಿಗದಿ ವಿಚಾರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ನಿನ್ನೆಯಷ್ಟೇ ಸರ್ಕಾರ ಪ್ರತಿ ಟನ್ ಕಬ್ಬಿಗೆ 3 ಸಾವಿರದ 300 ರೂ. ಫಿಕ್ಸ್ ಮಾಡಿರೋದಕ್ಕೆ ಬೆಳಗಾವಿ ರೈತರು ಒಪ್ಪಿಕೊಂಡರು. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ರೈತರು ಮಾತ್ರ ತಮ್ಮ ಪಟ್ಟು ಸಡಿಲಿಸುತ್ತಿಲ್ಲ. ನಮಗೆ 3 ಸಾವಿರದ 500 ರೂ. ಕೊಡಬೇಕು ಎನ್ನುತ್ತಿದ್ದಾರೆ. ನಾಳೆ ಮುಧೋಳದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಮುಧೋಳದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.