ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್ನ ಎಲ್ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (ಮುಂಬೈ ಮೆಟ್ರೋ ಲೈನ್ 4) ರ ಪಿಲ್ಲರ್ನ ಬೃಹತ್ ಕಟ್ಟಡ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೇಮಿಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿರುವ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಆಟೋ ಚಾಲಕ ಮತ್ತು ಮಹಿಳೆ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ, ಸ್ಥಳೀಯರು ರಕ್ಷಣಾ ಸಿಬ್ಬಂದಿ ಅವರನ್ನು ಹರಸಾಹಸ ಪಟ್ಟು ಹೊರತೆಗೆದಿದ್ದಾರೆ. ಈ ಸುತ್ತಿನಲ್ಲಿ 3 ರಿಂದ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ