ದೆಹಲಿ, ಜ.28: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 28, 2026) ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಮಾಡಿದ್ದಾರೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಸ್ಮರಿಸಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತಾರತಮ್ಯವಿಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ಸಾಮಾಜಿಕ ನ್ಯಾಯವು ಕೇವಲ ಘೋಷಣೆಯಾಗಬಾರದು, ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಕಳೆದ ಒಂದು ಪ್ರಗತಿಯನ್ನು ಗುರುತಿಸಿದ ರಾಷ್ಟ್ರಪತಿಗಳು ಒಂದು ಮಹತ್ವದ ಅಂಶವನ್ನು ಹಂಚಿಕೊಂಡರು. ಕಳೆದ 10 ವರ್ಷಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲವಾಗಿ 25 ಕೋಟಿ ನಾಗರಿಕರು ಬಡತನದ ರೇಖೆಯಿಂದ ಹೊರಬಂದಿದ್ದಾರೆ. ಬಡವರನ್ನು ಸಶಕ್ತಗೊಳಿಸುವ ಕಾರ್ಯಕ್ರಮಗಳು ಈಗ ಮೊದಲಿಗಿಂತ ಹೆಚ್ಚಿನ ವೇಗದಲ್ಲಿ ಸಾಗುತ್ತಿವೆ. ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದೆ. ‘ಲಖ್ಪತಿ ದೀದಿ’ ಮತ್ತು ಮಹಿಳಾ ಮೀಸಲಾತಿಯಂತಹ ಕ್ರಮಗಳು ಮಹಿಳೆಯರ ಜೀವನವನ್ನು ಬದಲಿಸುತ್ತಿವೆ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ