ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ


ಸಿಎಂ ಸಿದ್ದರಾಮಯ್ಯ ಭೇಟಿ ವೇಳೆ ತಾಲೂಕು ಕಚೇರಿಗೆ ಆರ್‌ಡಿಎಕ್ಸ್ ಬಾಂಬ್ ಬೆದರಿಕೆ

ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (ಬಾಂಬ್ ಬೆದರಿಕೆ) ಇ-ಮೇಲ್‌ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ.

ಇ-ಮೇಲ್ ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ

ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿರುವ ವೇಳೆ ಮೈಸೂರು ಸರಗೂರು ತಾಲ್ಲೂಕು ಕಚೇರಿಗೆ ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಮಧ್ಯಾಹ್ನ 1 ಗಂಟೆಗೆ ಸ್ಫೋಟಗೊಳ್ಳುವ ಎಚ್ಚರಿಕೆ ನೀಡಲಾಯಿತು, ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಟ ಅಜಿತ್ ಕುಮಾರ್ ಹೆಸರನ್ನೂ ಸಹ ಮೇಲ್ನಲ್ಲಿ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ಇದೆ ಮೊದಲೇನಲ್ಲ ಹುಸಿ ಬೆದರಿಕೆ

ಡಿ.12ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಆರೋಪಿ ಹಾಗೂ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಡಿ.15ರಂದು ಗದಗ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ, ಪಾಕ್ನ ಐಎಸ್ ಐ ಮತ್ತು ಎಲ್ ಟಿಟಿಐ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ ಗಳಿಂದ ಕಟ್ಟಡ ಭವನ ಸ್ಫೋಟಿಸುವ ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.

ಇದನ್ನೂ ಓದಿ ಗದಗ, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!

ಇದಷ್ಟೇ ಉತ್ತರ ಕನ್ನಡದ ಭಟ್ಕಳ ಮತ್ತು ತುಮಕೂರಿನ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ಅಧಿಕೃತ ಐ-ಮೇಲ್ ಐಡಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಪೊಲೀಸ್ ಡಿಸಿ ಕಚೇರಿಗೆ ಧಾವಿಸಿ ಒಳಭಾಗದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಈ ಎಲ್ಲಾ ಇ-ಮೇಲ್‌ಗಳೂ ಹುಸಿ ಬೆದರಿಕೆಗಳೆಂದು ತಿಳಿದುಬಂದಿದ್ದವು. ಇದೀಗ ಮತ್ತೊಮ್ಮೆ ಮೈಸೂರಿನಲ್ಲಿಯೂ ಬೆದರಿಕೆ ಇ-ಮೇಲ್ ಬಂದಿದ್ದು, ಗೊಂದಲ ಸೃಷ್ಟಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *