
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿರತೆ ಕಾರ್ಯಪಡೆ (Leopard Task Force), ಎಸಿಎಫ್ ರವೀಂದ್ರ ಮತ್ತು ಮೃಗಾಲಯದ ಪಶುವೈದ್ಯಾಧಿಕಾರಿ ಡಾ. ಶಶಿಕುಮಾರ್ ಅವರ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿದರು. ಚಿರತೆಗೆ ಎರಡು ಬಾರಿ ಅರವಳಿಕೆ ಮದ್ದು ನೀಡುವ ಮೂಲಕ ಅದನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು. ಸುಮಾರು ಎರಡೂವರೆ ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಸದ್ಯ ಅದನ್ನು ಕೂರ್ಗಳ್ಳಿಯ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
ಈ ಇಡೀ ಘಟನೆಯು ಮೈಸೂರು ಜನತೆಯಲ್ಲಿ ಒಂದು ಕಡೆ ಆತಂಕ ಮೂಡಿಸಿದ್ದರೆ, ಮತ್ತೊಂದು ಕಡೆ 90 ವರ್ಷದ ವೃದ್ಧೆಯ ಪ್ರಾಣ ಉಳಿದಿದ್ದನ್ನು ಕಂಡು ಜನ “ದೈವಬಲ” ಎಂದು ಮಾತನಾಡಿಕೊಳ್ಳುತ್ತಿದ್ದಾರೆ.