ಮೈಸೂರು, ಜ.15: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಿದೆ. ಇದೀಗ ನಿನ್ನೆ (ಜ.14) ರಾತ್ರಿ ಮಹಾಬಲೇಶ್ವರ ದೇವಸ್ಥಾನದಲ್ಲಿ ಕಳ್ಳತನ ಆಗಿದೆ. ಸರಗೂರು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿರುವ ಈ ದೇವಾಲಯದಲ್ಲಿದ್ದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣಗಳನ್ನು ದೋಚಿ ಪರಾರಿ ಮಾಡಲಾಗಿದೆ. ಬೆಳಗ್ಗೆ ಪೂಜೆ ಮಾಡಲು ದೇವಸ್ಥಾನಕ್ಕೆ ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇತ್ತೀಚಿಗೆ ಮೈಸೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ. ಕಳ್ಳರು, ದರೋಡೆಕೋರರ ಕಾಟಕ್ಕೆ ಮೈಸೂರಿನ ಜನ ಬೆಚ್ಚಿ ಬಿದ್ದಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ