ಮೈಸೂರು, ನವೆಂಬರ್ 3: ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಮೈಸೂರು (ಮೈಸೂರು) ಜಿಲ್ಲೆಯಲ್ಲಿ ಪಿರಿಯಾಪಟ್ಟಣ ನಡೆದಿದೆ. ಆದರೆ, ಸಾವಿಗೆ ಶರಣಾಗುವುದಕ್ಕೂ ಮುನ್ನ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪಗಳೆಲ್ಲ ಸುಳ್ಳು. ಎಲ್ಲದಕ್ಕೂ ಆ ಶಾಲೆಯ ಪಿಟಿ ಮಾಸ್ತರೇ ಕಾರಣ. ವಿದ್ಯಾರ್ಥಿನಿ ಗರ್ಭಿಣಿ ಯಾರಿಂದ ಎಂಬುದನ್ನು ಡಿಎನ್ಎ ಪರೀಕ್ಷೆ ಮೂಲಕ ಕಂಡುಹಿಡಿಯಬೇಕು ಎಂದು ಹೇಳಿದ್ದಾರೆ.
ಯುವಕನ ವಾಯ್ಸ್ ನೋಟ್ ನಲ್ಲೇನಿದೆ?
ಆತ್ಮಹತ್ಯೆಗೂ ಮುನ್ನ ವಾಯ್ಸ್ ನೋಟ್ ಮಾಡಿಟ್ಟಿರುವ ಯುವಕ, ವಿದ್ಯಾರ್ಥಿನಿ ಗರ್ಭಿಣಿಯಾಗುವುದಕ್ಕೆ ನಾನು ಕಾರಣ ಅಲ್ಲ. ನನಗೂ ಆಕೆಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದರು. ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ, ವೈದ್ಯರು ಬಂದು ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಆಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಶಾಲೆಗೆ ಕಳಂಕ ಬರುತ್ತದೆ ಎಂದು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.
ಮುಂದುವರಿದು, ಹುಡುಗಿಯನ್ನು ಮಾತನಾಡಿಸಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಶಾಲೆಯ ಪಿಟಿ ಟೀಚರ್ ಇದಕ್ಕೆಲ್ಲಾ ಕಾರಣ. ಅವರು ಹೀಗೆ ಮಾಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಾಯ್ಸ್ ನೋಟ್ ನಲ್ಲಿ ಯುವಕ ಹೇಳಿದ್ದಾನೆ.
ಇದನ್ನೂ ಓದಿ: ಮೈಸೂರಿನ ಸರಗೂರಲ್ಲಿ ನಿಲ್ಲದ ವ್ಯಾಘ್ರನ ಆರ್ಭಟ: ಹುಲಿ ದಾಳಿಗೆ ದನಗಾಹಿ ಸಾವು
ಅಕ್ಟೋಬರ್ 31ರಂದು ವಾಯ್ಸ್ ನೋಟ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕನ ದೇಹವಿದೆ. ಬೆಟ್ಟದ ತುಂಗ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್, ಜರ್ಕಿನ್ ಬಿಟ್ಟು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜೊತೆಗೆ, ಡಿಎನ್ಎ ಪರೀಕ್ಷೆ ಮೂಲಕ ತಪ್ಪಿತಸ್ಥರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ ಎಂದು ವಾಯ್ಸ್ ನೋಟ್ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ