ಬೆಂಗಳೂರು, ನವೆಂಬರ್ 9: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಹರಿದಾಡಿದೆ. ಈ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದಲ್ಲೇ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣ ಆಡಳಿತದಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ದೊರೆಯಬೇಕಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ