Headlines

ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ

ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ


ಬೆಂಗಳೂರು, ಫೆಬ್ರವರಿ 6: ನಮ್ಮ ಮೆಟ್ರೋ ಪ್ರಯಾಣ ಬಿಎಂಆರ್‌ಸಿಎಲ್ 5ರಷ್ಟು ದರವನ್ನು ಹೆಚ್ಚಿಸಿದ್ದು, ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಅಪಖ್ಯಾತಿಗೆ ಬೆಂಗಳೂರು ಮೆಟ್ರೋ ಎಂಬ ಹೆಸರು ಬಂದಿದೆ. ಈ ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರಲಿವೆ. ದೆಹಲಿ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಈಗ ಗಣನೀಯವಾಗಿ ಹೆಚ್ಚಾಗುತ್ತದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ‘ಟಿವಿ9’ ಜತೆ ಮಾತನಾಡಿದ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಮ ವರ್ಗದ ಜನರ ಮೇಲೆ ಈ ದರ ಏರಿಕೆ ದೊಡ್ಡ ಹೊರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನ ಹರಿಸಿ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಪದೇ ಪದೇ ದರ ಏರಿಸುವುದರಿಂದ ಜನಸಾಮಾನ್ಯರ ಬದುಕಿಗೆ ಕಷ್ಟವಾಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *