Headlines

ಟ್ರಾಫಿಕ್​​​ನಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಗುಡ್​ನ್ಯೂಸ್, ಕೇಂದ್ರದತ್ತ ಎಲ್ಲರ ಚಿತ್ತ

ಟ್ರಾಫಿಕ್​​​ನಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಗುಡ್​ನ್ಯೂಸ್, ಕೇಂದ್ರದತ್ತ ಎಲ್ಲರ ಚಿತ್ತ


ಬೆಂಗಳೂರು, (ಜನವರಿ 21): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ಗೆ (ಬೆಂಗಳೂರು ಸಂಚಾರ) ಜನ ಬೇಸತ್ತಿದ್ದಾರೆ. ಅದರಲ್ಲೂ ಕೆಲ ಏರಿಯಾಗಳಿಗೆ ಹೋಗಬೇಕೆಂದರೆ ಟ್ರಾಫಿಕ್ ಎಂಬ ಸಾಗರವನ್ನು ದಾಟಿಕೊಂಡು ಹೋಗಬೇಕು. ಹೌದು..ಹೆಬ್ಬಾಳ-ಸರ್ಜಾಪುರ (ಹೆಬ್ಬಾಳದಿಂದ ಸರ್ಜಾಪುರ)ಮಾರ್ಗದ ರಸ್ತೆ ಯಾವಾಗಲೂ ವಾಹನಗಳಿಂದ ತುಂಬಿ ತುಳುಕುತ್ತಿರುತ್ತೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸವಾರರು ಟ್ರಾಫಿಕ್ ಕಿರಿಕಿರಿಗೆ ಬೇಸತ್ತು ಹೋಗಿದ್ದಾರೆ. ಈ ಮಾರ್ಗದಲ್ಲಿ ಮೆಟ್ರೋ ನಿರ್ಧರಿಸಲು ನಿರ್ಧರಿಸಲಾಗಿದೆ, ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಚರ್ಚೆ ಅಂತಿಮ ಹಂತಕ್ಕೆ ಬಂದಿದೆ. ಆದ್ದರಿಂದ ಯೋಜನೆ ಮೆಟ್ರೋ ಹಂತ 3A ಆರಂಭಕ್ಕೆ ಸಿದ್ದತೆ ನಡೆಯುತ್ತಿತ್ತು, ಹೆಬ್ಬಾಳ-ಸರ್ಜಾಪುರವರೆಗೆ ವಿಸ್ತೃತ ಕೆಂಪು ಮಾರ್ಗ (ಹೆಬ್ಬಾಳದಿಂದ ಸರ್ಜಾಪುರ ರೆಡ್ ಲೈನ್ ಮೆಟ್ರೋ) ನಿರ್ಮಾಣ ಕಾರ್ಯ.

ಅಂತಿಮ ಡಿಪಿಆರ್ ವರದಿ ಸಿದ್ಧ

ಈ ಯೋಜನೆಗೆ ಈ ಹಿಂದೆ ರಾಜ್ಯ ಸರ್ಕಾರ 28,405 ಕೋಟಿ ರೂ. ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ, ಯೋಜನಾ ವೆಚ್ಚಕ್ಕಿಂತ ಕಡಿಮೆ ಮಾಡಿ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರ ಥರ್ಡ್ ಪಾರ್ಟಿಯಿಂದ ಮತ್ತೊಮ್ಮೆ ಹೊಸ DPR ರೆಡಿ ಮಾಡಿದ್ದು, ಇದರಲ್ಲಿ 28,405 ಕೋಟಿಯಿಂದ 25,485 ಕೋಟಿ ರೂ. ವೆಚ್ಚವನ್ನು ಇಳಿಸಲಾಗಿದೆ. ಅಂದರೆ 2,920 ಕೋಟಿಗಳಷ್ಟು ಯೋಜನಾ ವೆಚ್ಚವನ್ನು ಕಡಿಮೆ ಮಾಡಲಾಗಿದೆ.

ಇದನ್ನೂ ಓದಿ: ವಿಮಾನ ಪ್ರಯಾಣಿಕರನ್ನು ಗಮನಿಸಿ: ಬೆಂಗಳೂರು ವಿಮಾನ ನಿಲ್ದಾಣದಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ

ಈ ಹಿಂದೆ ಒಂದು ಕಿಮೀ 767 ಕೋಟಿ ರೂ. ವೆಚ್ಚವಾಗುತ್ತದೆ ಎಂದು ಡಿಪಿಆರ್ ಮಾಡಲಾಗಿದೆ. ಇದೀಗ ಒಂದು ಕಿಮೀಗೆ 688 ಕೋಟಿ ರೂಪಾಯಿ ವೆಚ್ಚ ಎಂದು ವರದಿ ನೀಡಲಿದೆ, ಸದ್ಯದಲ್ಲೇ ಹೊಸ ಡಿಪಿಆರ್ ಸಲ್ಲಿಸಲಿದೆ. ಬಳಿಕ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಿದೆ.

ಸರ್ಜಾಪುರ ಟು ಹೆಬ್ಬಾಳ ಮೆಟ್ರೋ ಮಾರ್ಗದ ವಿವರ

ಇನ್ನೂ 37 ಕಿಮೀ ವಿಸ್ತೀರ್ಣದ ಸರ್ಜಾಪುರ ಟು ಹೆಬ್ಬಾಳ ಮಾರ್ಗದಲ್ಲಿ ಒಟ್ಟು 28 ಮೆಟ್ರೋ ಸ್ಟೇಷನ್ ಗಳು ಬರಲಿವೆ. 22.14 ಕಿಮೀ ಎಲಿವೇಟೆಡ್ ಮೆಟ್ರೋ ಸ್ಟೇಷನ್ ಗಳು, 14.45 ಕಿಮೀ ಅಂಡರ್ ಗ್ರೌಂಡ್‌ನಲ್ಲಿ ಮೆಟ್ರೋ ಸ್ಟೇಷನ್ ಗಳು. ಈ ಕೆಂಪು ಮೆಟ್ರೋ ಮಾರ್ಗವು ಹೆಬ್ಬಾಳದಲ್ಲಿ ಮೆಟ್ರೋ ‘ನೀಲಿ ಮಾರ್ಗ’, ಕೆಆರ್’ ವೃತ್ತದಲ್ಲಿ ‘ನೇರಳೆ ಮಾರ್ಗ’ ಸಂಧಿಸಲಿದೆ. ಇನ್ನೂ ಡೈರಿ ವೃತ್ತದಲ್ಲಿ ‘ಗುಲಾಬಿ ಮಾರ್ಗ’ ಹಾಗೂ ಅಗರದಲ್ಲಿ ‘ನೀಲಿ ಮಾರ್ಗ’ ವನ್ನು ಸಂಧಿಸುತ್ತದೆ. ಹೀಗಾಗಿ ಇಲ್ಲಿ ನಾಲ್ಕು ಇಂಟರ್‌ಚೇಂಜ್ ನಿಲ್ದಾಣಗಳು ನಿರ್ಮಾಣಗೊಳ್ಳಲಿವೆ.

ಈ ಮಾರ್ಗದಲ್ಲಿ ಯಾವ್ಯಾವ ಏರಿಯಾದಲ್ಲಿ ಮೆಟ್ರೋ ಸ್ಟೇಷನ್ ಗಳು ಬರಲಿವೆ ಅಂತ ನೋಡುವುದಾದರೆ, ಹೆಬ್ಬಾಳ, ಗಂಗಾನಗರ, ಪಶುವೈದ್ಯಕೀಯ ಮಹಾವಿದ್ಯಾಲಯ, ಮೇಖ್ರಿ ಸರ್ಕಲ್, ಗಾಲ್ಫ್ ಕ್ಲಬ್, ಪ್ಯಾಲೇಸ್ ಗುಟ್ಟಹಳ್ಳಿ, ಬಸವೇಶ್ವರ ವೃತ್ತ, ಕೆಆರ್ ಸರ್ಕಲ್, ಟೌನ್ ಹಾಲ್, ಶಾಂತಿನಗರ, ನಿಮ್ಹಾನ್ಸ್, ಡೈರಿ ಸರ್ಕಲ್, ಕೋರಮಂಗಲ 3ನೇ ಬ್ಲಾಕ್, ಕೋರಮಂಗಲ ಬ್ಲಾಕ್, ಕೋರಮಂಗಲ 3ನೇ ಬ್ಲಾಕ್, ಕೋರ್ಮಂಗಲ, 2ನೇ ಬ್ಲಾಕ್ ಬೆಳ್ಳಂದೂರು ಗೇಟ್, ಕೈಕೊಂಡೂರು, ದೊಡ್ಡಕನ್ನಳ್ಳಿ, ಕಾರ್ಮೆಲಾರಂ, ದೊಡ್ಡಕನ್ನಳ್ಳಿ, ಅಗ್ರಹಾರ ರಸ್ತೆ ಮತ್ತು ಸರ್ಜಾಪುರ.

ಒಟ್ನಲ್ಲಿ ನಗರದ ಮೂಲೆ ಮೂಲೆಗೂ ಮೆಟ್ರೋ ವಿಸ್ತರಣೆ ಆಗುತ್ತಿರುವುದರಿಂದ ಟ್ರಾಫಿಕ್ ಕಡಿಮೆಯಾಗುತ್ತಿರುವುದಕ್ಕೆ ಸಾರ್ವಜನಿಕರು ಸಂತೋಷಗೊಂಡಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ಕೆಂಪು ಮಾರ್ಗಕ್ಕೆ ಯಾವಾಗ ಗ್ರೀನ್ ಸಿಗ್ನಲ್ ನೀಡುತ್ತದೋ ಕಾದು ನೋಡಬೇಕಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *