ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ನ್ಯೂಸ್ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಳು ಈ ವರ್ಷದಿಂದ ಕಾರ್ಯಾರಂಭ ಮಾಡಲಿವೆ. ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಸಂಚಾರದಿಂದ ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಿದೆ.
ಯಾವೆಲ್ಲ ಹೊಸ ಮಾರ್ಗ ಓಪನ್?
2026 ರ ಅಂತ್ಯದ ಒಳಗೆ ಪಿಂಕ್ ಮತ್ತು ಬ್ಲ್ಯೂ ಲೈನ್‌ಗಳಲ್ಲಿ ಮೆಟ್ರೋ ರೈಲುಗಳು ವಾಣಿಜ್ಯ ಸಂಚಾರ ನಡೆಸಲಿವೆ. ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಓಪನ್ ಆದರೆ, ಡಿಸೆಂಬರ್ ವೇಳೆಗೆ ಬ್ಲ್ಯೂ ಲೈನ್ ನ ಮೊದಲ ಹಂತವೂ ಕಾರ್ಯಾಚರಣೆ ಆರಂಭವಾಗಲಿದೆ. ಕಾಳೇನ ಅಗ್ರಹಾರ ತು ನಾಗವಾರ ಸಂಪರ್ಕಿಸುವ ಪಿಂಕ್ ಲೈನ್ 21.25 ಕಿ.ಮೀ. ವಿಸ್ತೀರ್ಣವಿದ್ದು, ಆ ಎತ್ತರದ ಕಾಳೇನ ಅಗ್ರಹಾರ ಟು ತಾವರೆಕೆರೆ 7.5 ಕಿ.ಮೀ.ಯ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್‌ಗಳು ಮೇನಲ್ಲಿ ಓಪನ್ ಆಗಲಿದೆ. ನವೆಂಬರ್‌ನಲ್ಲಿ ತಾವರೆಕೆರೆ ಟು ನಾಗವಾರ 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್‌ಗಳ ಕಾರ್ಯಾಚರಣೆ ಪ್ರಾರಂಭವಾಗಿದೆ. ಪಿಂಕ್ ಲೈನ್‌ಗಾಗಿ BEML ನಿಂದ ಒಂದು ಡ್ರೈವರ್ಲೆಸ್ ರೈಲು ಕೂಡ ಬಂದಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ; ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು
ಬ್ಲೂ ಲೈನ್ ಸಿಲ್ಕ್ ಬೋರ್ಡ್ ಕೆ.ಆರ್.ಪುರಂ ಮಾರ್ಗ ಈ ವರ್ಷ ಡಿಸೆಂಬರ್ ವೇಳೆಗೆ ಓಪನ್ ಆಗಲಿದೆ. ಇದು 17.75 ಕಿ.ಮೀ. ಮಾರ್ಗದಲ್ಲಿ, 13 ಸ್ಟೇಷನ್ಗಳಿವೆ. ನೀಲಿ ಮಾರ್ಗವು ಒಟ್ಟು 58.19 ಕಿ.ಮೀ. ವಿಸ್ತೀರ್ಣವಿದ್ದು, ಮೊದಲ ಹಂತ 2026ರ ವರ್ಷಾಂತ್ಯದ ವೇಳೆಗೆ ಕಾರ್ಯಾರಂಭವಾದರೆ, 2027ರಲ್ಲಿ ಎರಡನೇ ಹಂತ ಆಗಲಿದೆ. ಈ ಎರಡು ಮಾರ್ಗಗಳು ಕಾರ್ಯಾಚರಣೆ ಆರಂಭಿಸಿದರೆ ನಗರದ ಟ್ರಾಫಿಕ್ ಇಳಿಕೆಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಮೆಟ್ರೋ ಪ್ರಯಾಣಿಕರು ಕೂಡ ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 6:56 am, ಮಂಗಳವಾರ, 6 ಜನವರಿ 26