ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್ ನ್ಯೂಸ್ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್‌ಲೈನ್‌ನ ಸರ್ಜಾಪುರ ಟು ಹೆಬ್ಬಾಳ ಯೋಜನೆ ಡಿಪಿಆರ್‌ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸುತ್ತದೆ.
ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ?
ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405 ಕೋಟಿ ಡಿಪಿಆರ್ ಹಿನ್ನೆಲೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ. ಡಬಲ್ ಡೆಕ್ಕರ್ ಮಾಡೋದ್ರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಕಾರಣ ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಬೇಡ ಎಂದು ಕೇಂದ್ರ ಸರ್ಕಾರವಿದೆ. ಅಗತ್ಯವಿರುವಲ್ಲಿ ಅಗತ್ಯ ಜಂಕ್ಷನ್‌ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಮಾಡಲು ಒಪ್ಪಿಗೆ ಸೂಚಿಸಲು, ಮರುಶೀಲನೆ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗುತ್ತದೆ.
ಇದನ್ನೂ ಓದಿ: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL
ಬೆಂಗಳೂರು ನಮ್ಮ ಮೆಟ್ರೋ 3 ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆ ಡಿಪಿಆರ್ ರಾಜ್ಯ ಸರ್ಕಾರಕ್ಕೆ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳಿಗೆ ಈ ಮಾರ್ಗವಿದೆ. ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆಯಾದರೂ ಈಗ ಕೇಂದ್ರ ಸರ್ಕಾರದ ಯೋಜನೆ ಡಿಪಿಆರ್‌ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.