ಉಡುಪಿ ಭೇಟಿಗೆ ಪ್ರಧಾನಿ ಮೋದಿ ಕಾತರ: ಕನ್ನಡ ನಾಡಿಗೆ ಬರುತ್ತಿರುವುದಕ್ಕೆ ಕನ್ನಡದಲ್ಲೇ ಖುಷಿ ಹಂಚಿಕೊಂಡ ನಮೋ

ಉಡುಪಿ ಭೇಟಿಗೆ ಪ್ರಧಾನಿ ಮೋದಿ ಕಾತರ: ಕನ್ನಡ ನಾಡಿಗೆ ಬರುತ್ತಿರುವುದಕ್ಕೆ ಕನ್ನಡದಲ್ಲೇ ಖುಷಿ ಹಂಚಿಕೊಂಡ ನಮೋ


ಉಡುಪಿ, (ನವೆಂಬರ್ 27): ಪ್ರಧಾನಿ ನರೇಂದ್ರ ಮೋದಿ (ಪಿಎಂ ನರೇಂದ್ರ ಮೋದಿ) ಅವರು ನಾಳೆ (ನವೆಂಬರ್ 28) ಉಡುಪಿಯ (ಉಡುಪಿ) ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಾಗುವುದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮಠಕ್ಕೆ ಆಗಮಿಸುತ್ತಾರೆ, ಕನಕದಾಸರಿಗೆ ಪುಷ್ಪಾರ್ಚನೆ ಮಾಡುತ್ತಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರು ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಇನ್ನು ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಕಾತರರಾಗಿದ್ದರೆ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಉಡುಪಿ ಭೇಟಿ ಬಗ್ಗೆ ಪ್ರಧಾನಿ ಮೋದಿ ಮಾತು

ನಾಳೆ ಉಡುಪಿಗೆ ಭೇಟಿ ನೀಡುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷವಾದ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೃಷ್ಣ ಮಠ ಭೇಟಿಗೂ ಮುನ್ನ ಉಡುಪಿಯಲ್ಲಿ ಮೋದಿ ರೋಡ್ ಶೋ; ಸಿದ್ಧತೆ ಹೇಗಿದೆ ಗೊತ್ತಾ?

ಇನ್ನು ಪ್ರಧಾನಿಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಕೃಷ್ಣಮಠ ಸಕಲ ರೀತಿಯಲ್ಲೂ ಸಜ್ಜಾಗಿದೆ. ಪ್ರಧಾನಿ ರೋಡ್ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆ ಬರಲಿದೆ, ಶ್ರೀಕೃಷ್ಣ ಮುಖ್ಯಪ್ರಾಣ ದೇವರು ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪರ್ಯಾಯ ಶ್ರೀಗಳು, ಸರ್ವಜ್ಞ ಪೀಠ, ಗೋಶಾಲೆ ದರ್ಶನ ಮಾಡಿದ ಬಳಿಕ ಅವರು ಗೀತಾಮಂದಿರಕ್ಕೆ ಭೇಟಿ ನೀಡುತ್ತಾರೆ. ಅಲ್ಲಿ ಲಘು ಉಪಹಾರ ಸೇವಿಸುವರು. ನಂತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಲಕ್ಷ ಕಂಠ ಗೀತೆಯ ಅಂಗವಾಗಿ ಭಗವದ್ಗೀತೆ 18 ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಪಠಿಸಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉಡುಪಿ ಭೇಟಿ: ಶ್ರೀ ಕೃಷ್ಣ ಮಠ ಸುತ್ತ ಬಿಗಿ ಬಂದೋಬಸ್ತ್, ದೇಗುಲಕ್ಕೆ ಬರುವವರು ಈ ಮಾರ್ಗಸೂಚಿ ಪಾಲಿಸಿ

ಬಿಗಿ ಪೊಲೀಸ್ ಬಂದೋಬಸ್ತ್

ಪ್ರಧಾನಿ ಭೇಟಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಮಂದಿ ಪೊಲೀಸ್ ಆಯುಕ್ತರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವ ವಹಿಸಿದ್ದು, ಅಲ್ಲಿಗೆ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದೆ. ಸ್ಥಳೀಯ ಪೊಲೀಸ್ ಸಿಬ್ಬಂದಿ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್‌ ವ್ಯವಸ್ಥೆ ಎಡಿಜಿಪಿ ಜಿತೇಂದ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ನೇತೃತ್ವದಲ್ಲಿ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಉಡುಪಿಯತ್ತ ತೆರಳುವವರು.

  • ಬೆಳಗ್ಗೆ 8.15: ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಪಯಣ.
  • ಬೆಳಗ್ಗೆ 11.05: ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ.
  • ಬೆಳಗ್ಗೆ 11.10: ಹೆಲಿಕಾಪ್ಟರ್ ಮೂಲಕ ಪಯಣ.
  • ಬೆಳಗ್ಗೆ 11.35: ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮನ.
  • ಬೆಳಗ್ಗೆ 11.45: ಆದಿ ಉಡುಪಿ ಹೆಲಿಪ್ಯಾಡ್‌ನಿಂದ ರಸ್ತೆ ಮೂಲಕ ಶ್ರೀಕೃಷ್ಣ ಮಠಕ್ಕೆ ಪಯಣ.
  • ಮಧ್ಯಾಹ್ನ 12: ಶ್ರೀಕೃಷ್ಣ ಮಠ ಭೇಟಿ, ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿ.
  • ಮಧ್ಯಾಹ್ನ 12ರಿಂದ 1.30: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಪುತ್ತಿಗೆ ಶ್ರೀ ಭೇಟಿ.
  • ಮಧ್ಯಾಹ್ನ 1.35: ಶ್ರೀಕೃಷ್ಣಮಠದಿಂದ ನಿರ್ಗಮನ.
  • ಮಧ್ಯಾಹ್ನ 1.45: ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣ.
  • 2.15: ವಾಯುಪಡೆ ವಿಮಾನದ ಮೂಲಕ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ಪಯಣ.
  • 3.05: ದಾಬೋಲಿಂ ವಿಮಾನ ನಿಲ್ದಾಣದಿಂದ ಗೋಕರ್ಣ ಪರ್ತಗಳಿ ಜೀವೋತ್ತಮ ಮಠದ ಧಾರ್ಮಿಕ ಕಾರ್ಯಕ್ರಮ ಭಾಗಿ.

ಮಂಗಳೂರು ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ನಿಷೇಧ

ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ನಾಳೆ (ನವೆಂಬರ್ 28) ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ಹಾರಾಟ ಮತ್ತು ಸಂಪೂರ್ಣ ಬಳಕೆಯನ್ನು ನಿಷೇಧಿಸಲಾಗಿದೆ.

ಇನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲು ಸಿಐಎಸ್ಎಫ್ ಜೊತೆ ಸ್ಥಳೀಯ ಪೊಲೀಸರು ನಿಯೋಜಿಸಲಾಗಿದೆ. ಮೋದಿ ವಿಮಾನ ನಿಲ್ದಾಣದಿಂದ ಹೊರಗೆ ಬರದೇ ಒಳಗಿಂದಲೇ ಹೆಲಿಕಾಪ್ಟರ್ ಟೇಕಾಫ್ ಆಗುವ ರೀತಿ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್ ವಾಪಾಸ್ ಏರ್ಪೋರ್ಟ್ ಒಳಗೆ ಲ್ಯಾಂ ಆಗಲಿದೆ.





Source link

Leave a Reply

Your email address will not be published. Required fields are marked *