
ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರ ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನಾ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ‘ನಾರಿ ಶಕ್ತಿ ವಂದನ ಕಾಯ್ದೆ’ ಭಾರತದ ರಾಜಕೀಯ ಇತಿಹಾಸದಲ್ಲೇ ಒಂದು ಕ್ರಾಂತಿಕಾರಿ ಬದಲಾವಣೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು (ಮೂರನೇ ಒಂದು ಭಾಗ) ಮೀಸಲಾತಿ ನೀಡುವ ಈ ಕಾಯ್ದೆಯು ಈಗ ಅನುಷ್ಠಾನದ ಹಂತಕ್ಕೆ ಬಂದಿದೆ.
ಈ ಏಪ್ರಿಲ್ 16 ರಿಂದ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಮ್ಮೇಳನ ಇಂದು ಭದ್ರ ಬುನಾದಿ ಹಾಕಲಿದೆ.ವಿಜ್ಞಾನ, ಕ್ರೀಡೆ, ಉದ್ಯಮಶೀಲತೆ, ಕಲೆ ಮತ್ತು ಮಿಲಿಟರಿ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರನ್ನು ಒಂದೇ ವೇದಿಕೆಗೆ ತರುವುದು.2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಪಡಿಸಿದ ರಾಷ್ಟ್ರವನ್ನಾಗಿ ಮಾಡುವ ಗುರಿಯಲ್ಲಿ ಮಹಿಳಾ ಸಬಲೀಕರಣವನ್ನು ಕೇಂದ್ರ ಸ್ತಂಭವಾಗಿ ಸ್ಥಾಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ