NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ವಿಸ್ತರಣೆ

2026-27 ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶನೀಡಲಾಗಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾದ ಅರ್ಜಿ ಸಲ್ಲಿಕೆಗಾಗಿ ಇದೀಗ ಮಾರ್ಚ್ 11 ರಂದು ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯ ಶುಲ್ಕವನ್ನು ಮಾರ್ಚ್ 11 ರ ರಾತ್ರಿ 11:59 ರಿಂದ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಅಥವಾ ಜೈವಿಕ ತಂತ್ರಜ್ಞಾನ) ವಿಷಯದ ವಿಜ್ಞಾನ ಇಂಟರ್ಮೀಡಿಯೇಟ್ ಅಥವಾ ಪಿಯುಸಿ ಉತ್ತರರಾದ ಹಾಗೂ ಕನಿಷ್ಠ 17 ವರ್ಷ ವಯೋಮಿತಿ ಹೊಂದಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1700, ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ವರ್ಗದವರಿಗೆ ರೂ. 1600 ಹಾಗೂ ಎಸ್‌ಸಿ/ಎಸ್‌ಟಿ/ದಿವ್ಯಾಂಗ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ. 1000 ನೋಂದಣಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10ನೇ ಪಾಸಾಗಿದ್ರೆ ಸಾಕು!

ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಪೆನ್ ಮತ್ತು ಪೇಪರ್ (ಆಫ್ಲೈನ್) ಮಾದರಿಯಲ್ಲಿ ಪರೀಕ್ಷೆ ನಡೆಯುತ್ತದೆ, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳಿಗೆ 011-40759000/69227700 ಸಂಖ್ಯೆಗಳು ಅಥವಾ neetug2026@nta.ac.in ಇಮೇಲ್ ಅನ್ನು ಸಂಪರ್ಕಿಸಲಾಗಿದೆ. ಸರ್ವರ್ ಡೌನ್ ಸಮಸ್ಯೆ ಕೊನೆಯ ಕ್ಷಣದವರೆಗೆ ಕಾಯದೆ ಅರ್ಜಿ ಸಲ್ಲಿಸುವುದು ಉತ್ತಮ ಎಂದು NTA ಸೂಚಿಸಿದೆ.

NEET ಯುಜಿ ಆನ್‌ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *