
ನೆಲಮಂಗಲ, ಜನವರಿ 24: ಡಿ ಮಾರ್ಟ್ ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ (ತಾಯಿ ಮತ್ತು ಮಗ) ಟಾಟಾ ಎಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (ಸಾವು) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶೈಲಜಾ(45), ಪ್ರಜ್ವಲ್(26) ಮೃತ ತಾಯಿ, ಮಗ. ತ್ಯಾಮಗೊಂಡ್ಲು ಪೊಲೀಸ್ ಠಾಣಾ ಪ್ರಕರಣ ನಡೆದಿದೆ.
ನಡೆದದ್ದೇನು?
ತಾಯಿ ಮತ್ತು ಮಗ ಡಿ ಮಾರ್ಟ್‌ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ಮರಳಿದರು. ಈ ವೇಳೆ ನೆಲಮಂಗಲ ತಾಲ್ಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಟಾಟಾ ಏಸ್ ವಾಹನ ತಾಯಿ, ಮಗ ಇದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಎರಡು ಸ್ಥಳದಲ್ಲೇ ಕಾಣಿಸಿಕೊಂಡಿದ್ದಾರೆ.
ಬಸ್‌ಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ಬಳಿ ನಡೆದಿದೆ. ಕುಂದಾಪುರದಿಂದ ಕೊಲ್ಲೂರು ಕಡೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಬಸ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರು ಯುವಕರು ಗಂಭೀರವಾಗಿ ಹೊಡೆದಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಮಾಲೀಕ ಹಾಗೂ ಬೈಕ್ ಸವಾರರ ಗುರುತು ಪಟ್ಟಿಲ್ಲ.
ಇದನ್ನೂ ಓದಿ: ಖಾಸಗಿ ಬಸ್ – ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ
ಯುವಕರಿಬ್ಬರು ರಸ್ತೆ ಬದಿ ಬೈಕ್ ನಿಲ್ಲಿಸಿ ಬೇಕರಿ ಕಡೆ ಹೋಗಲು ಮುಂದಾಗಿದ್ದರು. ಈ ವೇಳೆ ಕಾರು ಚಾಲಕನ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ನೆಲಕ್ಕೆ ಬಿದ್ದಿದ್ದು, ಗಾಯಕ್ಕಾಗಿ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.