Headlines

ನೆಲಮಂಗಲ: ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲ: ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ


ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ; ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲ, ಡಿಸೆಂಬರ್ 13: ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರೀ ನೆಲಮಂಗಲ ಪ್ರಕರಣ (ನೆಲಮಂಗಲ) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೇ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಸ್ಪೆಂಡ್ ಆಗಿ ಮನೆಯಲ್ಲಿದ್ದರೂ ಬುದ್ದಿ ಕಲಿಯದ ಆಸಾಮಿ

ಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನದ ಪ್ರಕರಣ ದಾಖಲಾಗಿದ್ದು, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಗಿರಿಜೇಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಸಸ್ಪೆಂಡ್ ಮನೆಯಲ್ಲಿದ್ದರೂ ಬುದ್ದಿ ಕಲಿಯದ ಆಸಾಮಿ, ಭೂ ಸ್ಟರ್ ನಿಗೆ ತಿಳಿಯದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ತನ್ನ ಹಾಗೂ ಸಹಚರರ ಹೆಸರಿಗೆ ರಿಜಿ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ಡೆತ್ ನೋಟ್ ಬರೆದಿಟ್ಟು ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ: ಯುವಕನ ಬಲಿಪಡೆದ ಬೆತ್ತಲೆ ಫೋಟೊ

25 ಕೋಟಿ ರೂ. ಮೌಲ್ಯದ 8 ಜಮೀನು ಪರಭಾರೆ

ನೆಲಮಂಗಲ ತಾಲೂಕು ಸೋಂಪುರ ಹೋಬಳಿ, ಮಾಚನಹಳ್ಳಿ ಗ್ರಾಮದಲ್ಲಿರುವ ಥ್ಯಾಂಪಿ ಮ್ಯಾಥ್ಯೂ ಅವರಿಗೆ ಸೇರಿದ 8 ಬ್ಯಾಂಕ್ ಜಮೀನನ್ನು ಅವರಿಗೆ ತಿಳಿಯದೆ ಮೂರ್ನಾಲ್ಕು ಜನರ ಮೂಲಕ ರಿಜಿಸ್ಟರ್ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಜಮೀನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ(KIADB) ಸೇರಿದ್ದು, ಅದರ ಪರಿಹಾರ ಹಣ ಲಪಟಾಯಿಸಲು ಗಿರಿಜೇಶ್ ಯೋಜನೆ ರೂಪಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಿಜಿಸ್ಟರ್ ಆಗದೇ ಇದ್ದರೂ ದಾಖಲೆಗಳಲ್ಲಿ ಗಿರಿಜೇಶ್ ಹಾಗೂ ಇಬ್ಬರ ಹೆಸರುಗಳಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಥ್ಯಾಂಪಿ ಮ್ಯಾಥ್ಯೂ ನೀಡಿದ ದೂರಿನ ಮೇರೆಗೆ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *