ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ


ಸಂತ್ರಸ್ತೆ ಆರೋಪಿ ಪುನೀತ್ಚಿತ್ರದ ಕ್ರೆಡಿಟ್ ಮೂಲ: tv9

ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ನೀಡುತ್ತಿರುವ ಘಟನೆ ನೆಲಮಂಗಲ (ನೆಲಮಂಗಲ) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಮದುವೆಗೆ 200 ಗ್ರಾಂ ಚಿನ್ನಾಭರಣ ನೀಡಿ ಅದ್ದೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆಯಾದ ಒಂದು ವರ್ಷ ದಂಪತಿಗಳು ಅನ್ಯೋನ್ಯವಾಗಿದ್ದರು. ಆದರೆ, ನಂತರದ ದಿನಗಳಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಜಗಳ ಶುರುವಾಗಿದೆ, ಪುನೀತ್ ಪತ್ನಿಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದೆ.

ಪರ ಸ್ತ್ರೀ ಸಂಬಂಧವೇ ವಿವಾದಕ್ಕೆ ಕಾರಣ

ಈ ಮಧ್ಯೆ ಪುನೀತ್ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ. ಪತಿಯ ಕಿರುಕುಳ ತಾಳಲಾರದೆ ಪವಿತ್ರಾ ಕಳೆದ ನಾಲ್ಕು ವರ್ಷಗಳಿಂದ ದಾಬಸ್‌ಪೇಟೆಯಲ್ಲಿರುವ ತನ್ನ ಅಜ್ಜಿ-ತಾತನ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಈ ನಡುವೆ ಪುನೀತ್ ಪತ್ನಿಗೆ ವಿಚ್ಛೇದನ ನೀಡುವಂತೆ ಒತ್ತಾಯಿಸಿದ್ದಾರೆ.

ಒಡವೆ ಕೊಡದೆ ಸತಾಯಿಸುತ್ತಿರುವ ಪತಿ

ಪವಿತ್ರಾ ಅವರ 200 ಗ್ರಾಂ ಒಡವೆಗಳು ಪತಿಯ ಮನೆಯಲ್ಲೇ ಇವೆ. ಸಮಾರಂಭಗಳಿಗೆ ಹೋಗಲು ಓಡವೆ ಕೇಳಿದಾಗ ಪುನೀತ್ ಮತ್ತು ಆತನ ಕುಟುಂಬದವರು ಒಡವೆ ನೀಡದೆ ಗಲಾಟೆ ಮಾಡುತ್ತಿದ್ದಾರೆ ಎಂದು ಸಂತಸದಿಂದ ಪವಿತ್ರಾ ದೂರಿದ್ದಾರೆ. ಈ ಬಗ್ಗೆ ದಾಬಸ್‌ಪೇಟೆ ಪೊಲೀಸರಿಗೆ ದೂರು ನೀಡಿದರೂ ಸರಿಯಾಗಿ ಪ್ರತಿಕ್ರಿಯಿಸಿದ ಕಾರಣ, ಅನಾಥೆಯಾಗಿರುವ ತನಗೆ ನ್ಯಾಯ ಕೊಡಿಸುವಂತೆ ಪವಿತ್ರಾ ಅವರು ನೆಲಮಂಗಲ ಡಿವೈಎಸ್‌ಪಿ ಕಚೇರಿಯ ಮೆಟ್ಟಿಲೇರಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ: ಮಂಜುನಾಥ್, ಟಿವಿ9 ನೆಲಮಂಗಲ



Source link

Leave a Reply

Your email address will not be published. Required fields are marked *