Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು

Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು


ಇಸ್ರೇಲ್, ಫೆಬ್ರವರಿ 26: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲಿಯೇ ಇರಲಿದ್ದಾರೆ. ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೇತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ನೇತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದರು.

ಬುಧವಾರ ಜೆರುಸಲೆಂನಲ್ಲಿ ನಡೆದ ಜಂಟಿ ಭೋಜನಕೂಟಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತದ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸುವ ಮೂಲಕ ಪ್ರಧಾನಿ ಸರ್ಪ್ರೈಸ್ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕಾಣಿಸಿಕೊಂಡಿದ್ದು, ನಿಜಕ್ಕೂ ಅದ್ಭುತ, ಭಾರತೀಯ ಉಡುಪಿನ ಮೇಲಿನ ನಿಮ್ಮ ಒಲವು ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಬರೆದಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *