ನವದೆಹಲಿ, ನವೆಂಬರ್ 15: ದೆಹಲಿಯಲ್ಲಿ ಕಳೆದ ವಾರಾಂತ್ಯ ನಡೆದ ಕಾರು ಸ್ಫೋಟ (ದಿಲ್ಲಿ ಕಾರ್ ಬ್ಲಾಸ್ಟ್) ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 25ಕ್ಕೂ ಅಧಿಕ ಜನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೊಂದು ಆತ್ಮಾಹುತಿ ಕಾರ್ ಬಾಂಬ್ ದಾಳಿ ಎಂದು ತನಿಖೆಯಲ್ಲಿ ನಡೆದಿದೆ. ಆ ದಿನ ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು? ಜನರ ಪ್ರತಿಕ್ರಿಯೆ ಹೇಗಿತ್ತು? ಎಂಬ ಸಿಸಿಟಿವಿ ದೃಶ್ಯಾವಳಿಯ ಹೊಸ ವಿಡಿಯೋವನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ನವೆಂಬರ್ 10 ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದ ನಂತರದ ದೃಶ್ಯವನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಫೋಟಗೊಂಡ ಸ್ಥಳದಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿರುವ ಹಾಗೂ ಅದಕ್ಕೊಳಗಾಗಿರುವ ದೃಶ್ಯ ಸೆರೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ