ಕೊಪ್ಪಳ, (ಏಪ್ರಿಲ್ 16): ಆಂಜನೇಯನ ಜನ್ಮಸ್ಥಳ ಕೊಪ್ಪಳದ (ಕೊಪ್ಪಳ) ಅಂಜನಾದ್ರಿಯಲ್ಲಿ (ಅಂಜನಾದ್ರಿ ಬೆಟ್ಟ) ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದಾರೆ, ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಎಚ್ಚೆತ್ತುಕೊಂಡಿರುವ ಕೊಪ್ಪಳ, ಮಧ್ಯಾಹ್ನದ ವೇಳೆ ಬೆಟ್ಟಕ್ಕೆ ನಿಷೇಧಿತ ಆದೇಶ ಹೊರಡಿಸಲಾಗಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಬೆಟ್ಟ ಏರಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇದೇ ಸಮಯದಲ್ಲಿ ಭಕ್ತರು ಬಂದ್ರೆ ಮಾತ್ರ ಅಂಜನಾದ್ರಿ ಬೆಟ್ಟ ಹತ್ತಬಹುದು.
ಅಂಜನಾದ್ರೆ ಬೆಟ್ಟ ಹತ್ತಲು ಸಮಯ ನಿಗದಿ
ಅಂಜನಾದ್ರಿ ದೇವರ ದರ್ಶನಕ್ಕೆಂದು ಸ್ಥಳೀಯರು, ಜಿಲ್ಲೆ, ಹೊರ ರಾಜ್ಯಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದರೆ ಇನ್ನು ಮುಂದೆ ಹನುಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಸಮಯದ ಬ್ರೇಕ್ ಬೀಳಲಿದೆ. ಸದ್ಯಕ್ಕೆ ಸಮಯ ಮಿತಿ ಇಲ್ಲದೇ ದೇವರ ದರ್ಶನಕ್ಕೆ ಹೋಗುತ್ತಿರುವ ಭಕ್ತರಿಗೆ ಇನ್ಮುಂದೆ ಸಮಯ ನಿಗದಿಯಾಗಿದೆ, ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಬೆಟ್ಟ ಹತ್ತು ಸಮಯವನ್ನು ನಿಗದಿಪಡಿಸಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಅಂಜನಾದ್ರಿ ಬೆಟ್ಟ ಗೇಟ್ ಓಪನ್ ಆಗಲಿದೆ.
ಇದನ್ನೂ ಓದಿ: ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ?
ಸಮಯದ ಮಿತಿ ಯಾಕೆ?
ಹನುಮನ ಜನ್ಮಭೂಮಿ, ಗಂಗಾವತಿ ತಾಲೂಕಿನ ಹನುಮನಹಳ್ಳಿಯಲ್ಲಿರುವ ಅಂಜನಾದ್ರಿ ಪರ್ವತ ಈಗ ಅಕ್ಷರಶಃ ಕೆಂಡ ರೇಖೆ. ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು, 575 ಮೆಟ್ಟಿಲುಗಳನ್ನು ಹತ್ತಿ ಹನುಮನ ದರ್ಶನ ಪಡೆಯಬೇಕಿದೆ. ಆದರೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಬೆಟ್ಟ ಏರುವ ಭಕ್ತರಲ್ಲಿ ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ನಿರ್ಜಲೀಕರಣ (ನಿರ್ಜಲೀಕರಣ) ಮತ್ತು ಸುಸ್ತಿನಿಂದ ತೈಲ ಮೆಟ್ಟಿಲುಗಳ ಮೇಲೆಯೇ ಕುಸಿದು ಬಿದ್ದಿದೆ. ಕೆಲ ಭಕ್ತರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಪರಿಗಣಿಸಿದ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್, ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಹೊಸ ಆದೇಶ ಜಾರಿಯಲ್ಲಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಭಕ್ತರಿಗೆ ಬೆಟ್ಟ ಏರಲು ಪ್ರವೇಶ ನಿಷೇಧಿಸಲಾಗಿದೆ.
ಸಂಜೆ 4 ಗಂಟೆಯ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ. ಜಿಲ್ಲಾಡಳಿತದ ಈ ನಿರ್ಧಾರವನ್ನು ಭಕ್ತರು ಸ್ವಾಗತಿಸಿದ್ದಾರೆ. ಪ್ರಾಣಪಾಯ ತಡೆಯಲು ಈ ಕ್ರಮ ಅನಿವಾರ್ಯವಾಗಿತ್ತು ಅನ್ನೋದು ಕೆಲ ತಾತ್ಕಾಲಿಕ ಅಭಿಪ್ರಾಯವಾಗಿದೆ. ಬಿಸಿಲು ತುಂಬಾ ಜಾಸ್ತಿ ಇದೆ, ಮೆಟ್ಟಿಲು ಹತ್ತುವಾಗ ಅಡಚಣೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ನಿರ್ಧಾರ ಒಳ್ಳೆಯದು. ಆದರೆ ತಕ್ಷಣದ ತುರ್ತು ಪರಿಸ್ಥಿತಿಗೆ ಬೆಟ್ಟಲು ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ.
ಒಟ್ಟಿನಲ್ಲಿ, ದಿನದ ಪ್ರಖರತೆ ಕಡಿಮೆಯಾಗುವವರೆಗೂ ಹನುಮಪ್ಪನ ದರ್ಶನಕ್ಕೆ ಬರುವ ಭಕ್ತರು ಸಮಯದ ಬದಲಾವಣೆಯನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.