ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ಪಿ.ಸಿ. ಮೋಹನ್ ಅವರ ಮನವಿಯ ಮೇರೆಗೆ ಈ ಹೊಸ ರೈಲು ಪರಿಚಯಿಸಲಾಗುತ್ತಿದ್ದು, ಇದು ಪ್ರಸ್ತುತ 24 ಗಂಟೆಗಳ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.
ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಂಎಂಟಿ) ನಡುವೆ ಚಲಿಸಲಿದೆ.

ಡಿಸೆಂಬರ್ 2ರಂದು ನೈಋತ್ಯ ರೈಲ್ವೆಯ ಸ್ಥಾಯಿ ಸಮಿತಿ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ವಿಷಯ ಪ್ರಸ್ತಾಪಿಸಿದ್ದರು. ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಬೇಡಿಕೆ ಇಟ್ಟಿದ್ದರು. ಈಗ ಇರುವ ರೈಲುಗಳು 24-30 ಗಂಟೆ ತೆಗೆದುಕೊಳ್ಳುತ್ತವೆ. ಆದರೆ, ಬಸ್‌ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ.

ನಮಗೆ ಬಸ್‌ನಷ್ಟು ವೇಗದ ರೈಲು ಬೇಕು ಎಂದು ಸಂಸದ ಪಿ.ಸಿ.ಮೋಹನ್ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್, ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೇಸಿಗೆ ರಜೆ ಹಿನ್ನೆಲೆ, ಮೈಸೂರಿನಿಂದ ಪೂರ್ವ ಭಾರತಕ್ಕೆ ವಿಶೇಷ ರೈಲು, ಕರ್ನಾಟಕದ ಯಾವ ನಿಲ್ದಾಣಗಳಲ್ಲಿ ನಿಲುಗಡೆಯಿದೆ?

ಪ್ರಸ್ತುತ ಈ ಮಾರ್ಗದಲ್ಲಿ ಡಜನ್‌ಗಟ್ಟಲೆ ರೈಲುಗಳು ಸಂಚರಿಸುತ್ತಿದ್ದರೂ, ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ನೇರ ಸಂಪರ್ಕ ಕಲ್ಪಿಸುತ್ತಿದೆ. ಸುಮಾರು 1,136 ಕಿ.ಮೀ. ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ತಲುಪುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣದ ಸಮಯ ಗಣನೀಯವಾಗಿ ಕಡಿಮೆ ಆಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

ಇದನ್ನೂ ಓದಿ: ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು!

New Vande Bharat Sleeper train between Bengaluru and Mumbai approved. pic.twitter.com/dB1NIcndYF

— P C Mohan (@PCMohanMP) April 11, 2026

Source link