ಬೆಳಗಾವಿ, ಡಿಸೆಂಬರ್ 31: ಹೊಸ ವರ್ಷಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸ್ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26 ರಂದು ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಜೊತೆಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಕೊಠಡಿಗಳನ್ನು ನೀಡದಂತೆ ಸೂಚಿಸಲಾಗಿದೆ. ಅಗ್ನಿ ಅವಘಡಗಳನ್ನು ತಪ್ಪಿಸಲು ಅಗತ್ಯ ಕ್ರಮವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ. 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, KSRP, CAR ತುಕಡಿಗಳು ಮತ್ತು ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಯಾವುದೇ ರೀತಿಯ ಕಿರುಕುಳ ನಡೆದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆಯುಕ್ತರು ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.