‘ಮುಂದಿನ ಸಿಎಂ ಡಿಕೆ ಶಿವಕುಮಾರ್’: ಬೆಳಗಾವಿಯಲ್ಲಿ ಮೊಳಗಿತು ಘೋಷಣೆ

‘ಮುಂದಿನ ಸಿಎಂ ಡಿಕೆ ಶಿವಕುಮಾರ್’: ಬೆಳಗಾವಿಯಲ್ಲಿ ಮೊಳಗಿತು ಘೋಷಣೆ


ಬೆಳಗಾವಿ, ಡಿಸೆಂಬರ್ 9: ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ಬೆಂಬಲಿಗರು, ”ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ” ಎಂದು ಘೋಷಣೆಗಳನ್ನು ಕೂಗಿದ್ದಾರೆ. ಸಿದ್ದರಾಮಯ್ಯ ಅವರಿಗೆ 5 ವರ್ಷ ಸಿಎಂ ಅವಧಿ ಪೂರೈಸಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರ ಘೋಷಣೆ ಮೊಳಗಿದೆ.

ಏತನ್ಮಧ್ಯೆ, ಬೆಳಗಾವಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಂಎಲ್ ಸಿ ಚನ್ನರಾಜ್, ‘ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್’ ಎಂದಿರುವುದು ಗಮನ ಸೆಳೆದಿದೆ. ಎಂಎಲ್ಸಿ ಚನ್ನರಾಜ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಇದ್ದಾರೆ.

ಇನ್ನು ಬೆಳಗಾವಿಗೆ ಹೊರಡುವ ಮುನ್ನ ಯತೀಂದ್ರ ಹೇಳಿಕೆಗೆ ಡಿಕೆಶಿ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *