ಹೈದರಾಬಾದ್ ಮಾಲ್ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್ವಾಲ್ (ನಿಧಿ ಅಗರ್ವಾಲ್) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈ ಘಟನೆಯ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ.
ಡಿಸೆಂಬರ್ 17 ರಂದು ಹೈದರಾಬಾದ್ನ ಲುಲು ಮಾಲ್ನಲ್ಲಿ ರಾಜಾ ಸಾಬ್ನ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಿಧಿ ಚಿತ್ರತಂಡದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಊಹೆಗೂ ಮೀರಿದ ಸಂಖ್ಯೆಯ ಜನರು ಸೇರಿದ್ದರು.ಈವೆಂಟ್ ಮುಗಿದ ಬಳಿಕ ನಟಿ ಅಲ್ಲಿಂದ ಹೊರ ಬರಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸಾಕಷ್ಟು ಜನರು ಅವರ ದೇಹವನ್ನು ಟಚ್ ಮಾಡಿದರು. ಈ ಸಂಬಂಧ ಕೇಸ್ ಕೂಡ ದಾಖಲಾಯಿತು. ಶಿವಾಜಿ ಪ್ರತಿಕ್ರಿಯೆ..
ಹೈದರಾಬಾದ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಾಜಿ, ‘ನಿಧಿಯ ಉಡುಗೆ ಜನಸಮೂಹವನ್ನು ಕೆರಳಿಸಿತು’ ಎಂದು ನೇರವಾಗಿ ಅವರ ಉಡುಗೆ ಬಗ್ಗೆ ಆರೋಪ ಮಾಡಿದ್ದಾರೆ. ‘ಸಾಯಿ ಪಲ್ಲವಿ, ಅನುಷ್ಕಾ, ಸೌಂದರ್ಯ, ಭೂಮಿಕಾ ಮೊದಲಾದವರನ್ನು ಯಾರಾದರೂ ಟಚ್ ಮಾಡಿದ್ದಾರಾ? ಏಕೆಂದರೆ ಅವರು ಸರಿಯಾಗಿ ಬಟ್ಟೆ ಹಾಕುತ್ತಾರೆ’ ಶಿವಾಜಿ.
ಇದನ್ನೂ ಓದಿ: ನಿಧಿ ಅಗರ್ ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು
‘ಯಾರೂ ಪ್ರಚೋದಿಸಬೇಡಿ. ನೀವು ಹಾಗೆ ಮಾಡಿದರೆ ನಿಮ್ಮನ್ನು ಮುಟ್ಟಬಹುದು ಎಂದು ಭಾವಿಸುತ್ತಾರೆ. ನಿಮಗೆ ಹೇಗೆ ಅನಿಸುತ್ತದೆಯೋ ಹಾಗೆ ಉಡುಗೆ ಧರಿಸಿ. ಆದರೆ,ನಾನು ನಿಜವನ್ನು ಹೇಳುತ್ತಿದ್ದೇನೆ’ ಎಂದು ಅವರು ಹೇಳಿದರು.
ನಟಿಯ ಪ್ರತಿಕ್ರಿಯೆ
ಈ ಕಾಮೆಂಟ್ ಕಾರ್ಯಕ್ರಮಗಳಿಗೆ ಪ್ರತಿಕ್ರಿಯಿಸಿದ ನಿಧಿ, ‘ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಲುಲು ಮಾಲ್ದ ಫೋಟೋವನ್ನು ಹಂಚಿಕೊಂಡು, ‘ಸಂತ್ರಸ್ತತೆಯನ್ನು ದೂಷಿಸುವುದು ತಪ್ಪು’ ಎಂದರ್ಥದಲ್ಲಿ ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.