ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು


ಬೆಂಗಳೂರು, ಡಿ.4: ಡೀಪ್ ಫೇಕ್ ಕಾಟ ಮತ್ತೆ ಶುರುವಾಗಿದೆ. ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗ ಮತ್ತೆ ಇದರ ಟ್ರೆಂಡ್ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (ನಿರ್ಮಲಾ ಸೀತಾರಾಮನ್) ಅವರು ಟಾರ್ಗೆಟ್ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ದೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?

ಭಾರತದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಮೇಶ್ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್ ಫೇಕ್ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆಯಿದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮ ಮಾಡುವ ಸಾಧ್ಯತೆ ಇದೆ. ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್‌ಐಆರ್‌ನಲ್ಲಿ ದಿನಾಂಕ.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್ಐಎ ತೀವ್ರ ತನಿಖೆ

ಪ್ರಧಾನಿ ಮೋದಿಗೂ ತಪ್ಪಿಲ್ಲ ಡೀಪ್ ಫೇಕ್ ಕಾಟ:

ಪ್ರಧಾನಿ ನರೇಂದ್ರ ಮೋದಿ ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇಟಲಿ ಅಧ್ಯಕ್ಷರ ಜೊತೆಗೆ ಮೋದಿ ಸಂಪರ್ಕದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಹಿಳೆಯರೊಂದಿಗೆ ಗಾರ್ಬಾ ನೃತ್ಯದ ಬಗ್ಗೆ ಪ್ರಧಾನಿ ಅವರೇ ಕಾರ್ಯಕ್ರಮವನ್ನು ಹೇಳಿದರು. ಒಳ್ಳೆಯ ವಿಚಾರಕ್ಕೆ ತಂತ್ರಜ್ಞಾನವನ್ನು ಬಳಸಬೇಕು ಎಂದು ಯುವಕರಿಗೆ ಕಿವಿಮಾತು ಹೇಳಿದರು. ನವೆಂಬರ್ 2023 ರಲ್ಲಿ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಈ ಬಗ್ಗೆ ಅವರ ದೂರು ಕೂಡ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 9:35 am, ಗುರು, 4 ಡಿಸೆಂಬರ್ 25



Source link

Leave a Reply

Your email address will not be published. Required fields are marked *