ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಆರಂಭವಾಗಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಪಂದ್ಯಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಇಂಡಿಯಾ ಜಸ್ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿಲ್ಲ. ಮುಂಬರುವ ಟಿ20 ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.
ಜೊತೆಗೆ ಭರ್ಜರಿ ಫಾರ್ಮ್ನಲ್ಲಿರುವ ಹಾರ್ದಿಕ್ ಪಾಂಡ್ಯ ಕೂಡ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಫೆಬ್ರವರಿ 7 ರಿಂದ ಟಿ20 ಪ್ರಾರಂಭವಾಗಲಿದೆ, ಹೀಗಾಗಿ ಸ್ಟಾರ್ ಆಲ್ ರೌಂಡರ್ ವಿಶ್ರಾಂತಿ ನೀಡಲು ಬಿಸಿಗಾಗಿ ನಿರ್ಧರಿಸಲಾಗಿದೆ.
ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿರಲಿಲ್ಲ. ಇದೀಗ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ. ಇದಾಗ್ಯೂ ಇಬ್ಬರು ಕಿವೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನ್ಯೂಝಿಲೆಂಡ್ ಸರಣಿಗೆ ಭಾರತದ ಸಂಭಾವ್ಯ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್, ಹರ್ಷಿತ್ ರೆಡ್ಡಿ, ಹರ್ಷಿತ್ ರೆಡ್ಡಿ ಅರ್ಶ್ದೀಪ್ ಸಿಂಗ್.




