ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ

ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ


ಬೆಂಗಳೂರು, ಜನವರಿ 14: 1 ನೇಟೋರಿಯಸ್ ರೌಡಿ ಶೀಟರ್ನ ಹಳೇ ದ್ವೇಷದ ಹಿನ್ನೆಲೆ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 6 ಜನ ದುಷ್ಕರ್ಮಿಗಳ ತಂಡ ಅಟ್ಟಹಾಸಕ್ಕೆ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತ ನಡು ರಸ್ತೆಯಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಆರೋಪಿಗಳು ಹೊಂಚು ಹಾಕಿ ದಾಳಿ ನಡೆಸಿರುವ ವಿಚಾರ ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ.

ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ಸೋಮವಾರ ರಾತ್ರಿ ತಮ್ಮ ಸ್ನೇಹಿತನನ್ನು ಮಾತಾಡಿಸಿ ಆಟೋದಲ್ಲಿ ವಾಪಸ್ ಆಗಲು. ಈ ವೇಳೆ ಮಂಗಮ್ಮನಪಾಳ್ಯ ಮುಖ್ಯ ರಸ್ತೆಯ ತಿರುವಿನಲ್ಲಿ ಎದುರಾದ ಆರು ಮಂದಿ ದುಷ್ಕರ್ಮಿಗಳು ಏಕಾಏಕಿ ಆಟೋದಲ್ಲಿದ್ದವರ ಮೇಲೆ ಖಾರದ ಪುಡಿ ಎರಚಿ ಮಚ್ಚು, ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಟಾರ್ಗೆಟ್ ಆಗಿದ್ದ ಮೊಹಮ್ಮದ್ ಶಬ್ಬೀರ್ ಮೇಲೆಯೇ ತೀವ್ರ ದಾಳಿ ನಡೆಸುತ್ತಿದ್ದ ಆತ ಸ್ಥಳದಲ್ಲೇ ಉಸಿರು ಚೆಲ್ಲಿದ್ದರೆ, ಉಳಿದ ಐವರಿಗೆ ಗಂಭೀರ ಗಾಯದ ವಸ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: ಲಕ್ಷ ಲಕ್ಷ ಹಣ, ಒಡವೆ ಗಿಫ್ಟ್ ಕೊಟ್ರೂ ಮತ್ತೊಬ್ಬನ ಜತೆ ಚಕ್ಕಂದ; ಹಂತಕನ ಡೆತ್ ನೋಟ್ ನಲ್ಲಿ ಮಹಿಳೆ ಕೊಲೆ ರಹಸ್ಯ ಬಯಲು

ಜನ ಪತ್ತೆ ಜಾಗದಲ್ಲಿ ಈ ಕೃತ್ಯ ನಡೆದಿರುವ ಕಾರಣ ಪರಿಚಯಸ್ಥರೇ ಆರೋಪಿಗಳು ಪೊಲೀಸರಿಗೆ ಗೊತ್ತಾಗಿದ್ದು, ದಾಳಿ ವೇಳೆ ಆರೋಪಿ ನೀಡಿದ ದೂರಿನ ಮೇರೆಗೆ 6 ಜನರ ಬಂಡೇಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಸದ್ಯ ಇಬ್ಬರನ್ನ ವಶಕ್ಕೆ ಪಡೆದಿರುವ ಖಾಕಿ ವಿಚಾರಣೆ ನಡೆಸಿದ್ದು, ಉಳಿದ ಆರೋಪಿಗಳಿಗೆ ಬಲೆ ಬೀಸಿದೆ. ಇನ್ನು ಕೊಲೆಯಾದ ಶಬ್ಬೀರ್ ಕೂಡ ಸಾಮಾನ್ಯ ರೌಡಿಯಲ್ಲ. ಬೆಂಗಳೂರಿನ ವಿರುದ್ಧ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆ ಕೊಲೆ ಯತ್ನ, ರಾಬರಿ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಿವೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *