8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನೀವು ಇಷ್ಟು ಕಾಲ ಕೇಳಿದ ತಕ್ಷಣ ಇತರರಿಗೆ ಕೆಲಸ ಮಾಡಿಕೊಡುತ್ತಿದ್ದವರಿಗೆ ಕೆಲಸ ಆಗುವ ತನಕ ಒಂದು ರೀತಿ ಇರುತ್ತದೆ, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ. ಒಂದೇ ಕಡೆ ಹಾಗೂ ಒಂದೇ ರೀತಿಯಲ್ಲಿ ಆಲೋಚನೆ ಮಾಡುತ್ತಿರುವ ನೀವು ಇದೀಗ ನಾಲ್ಕೂ ಕಡೆಯ ಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದಕ್ಕೆ ಆರಂಭಿಸುತ್ತೀರಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಇಷ್ಟು ದಿನದ ಲೆಕ್ಕ ಬೇರೆ, ಈ ದಿನದಿಂದ ಬೇರೆ ಆಲೋಚನೆಯನ್ನು ಮಾಡಲಿದ್ದೇನೆ. ಅದಕ್ಕೆ ತಕ್ಕಂತೆ ಕೆಲವು ಯೋಚನೆ ನಿಮಗೆ ಬರಲಿದೆ. ಎಷ್ಟು ಪ್ರಯತ್ನ ಮಾಡಿದರೂ ಆದಾಯ ಪಡೆಯಲು ಸಾಧ್ಯವಾಗುತ್ತಿಲ್ಲ, ಅಂದುಕೊಂಡ ವೇಗದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ನಿಮಗೆ ಅನಿಸುತ್ತದೆ, ಇದಕ್ಕೆ ಕಾರಣ ಏನು ಎಂದು ಯೋಚಿಸಿ, ಈ ದಿನ ನಿಮ್ಮ ಸ್ವಂತ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ನವ ವಿವಾಹಿತರು ಇದ್ದಲ್ಲಿ ಕುಟುಂಬದ ಎಲ್ಲ ಸದಸ್ಯರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ನಿರ್ಧರಿಸುತ್ತೀರಿ. ರೆಸಾರ್ಟ್, ಸಿನಿಮಾ ಅಥವಾ ರೆಸ್ಟೋರೆಂಟ್ ಗಳಿಗೆ ತೆರಳುವಂಥ ಯೋಗ ಇದೆ. ಇನ್ನು ನಿಮ್ಮಲ್ಲಿ ಕೆಲವರು ಕಿರು ಪ್ರವಾಸಕ್ಕೆ ತೆರಳುವಂಥ ಯೋಗ ಇದೆ. ಆದರೆ ಈ ದಿ ಮಕ್ಕಳ ಅಥವಾ ಮನೆಯಲ್ಲಿ ಇರುವ ಕಿರಿಯ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವನ್ನು ವಹಿಸಿ.
ಲೇಖನ- ಸ್ವಾತಿ ಎನ್.ಕೆ.